ಬೆಂಗಳೂರಿನಲ್ಲಿ ಮಳೆ ಆರ್ಭಟ; ಮುಳುಗಿದ ಮಾನ್ಯತಾ ಟೆಕ್ಪಾರ್ಕ್, ವಿಡಿಯೋ ವೈರಲ್
ನ್ಯೂಸ್ ಆ್ಯರೋ: ಇಂದು ಬೆಳಗ್ಗೆಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಬೆಂಗಳೂರಿನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತ ಮಳೆಯಿಂದಾಗಿ 300 ಎಕರೆ ಪ್ರದೇಶದಲ್ಲಿರುವ ಬೆಂಗಳೂರಿನ ಐಟಿ ಹಬ್ ಮಾನ್ಯತಾ ಟೆಕ್ ಪಾರ್ಕ್ ಜಲಾವೃತಗೊಂಡಿರುವ ವಿಡಿಯೋ ವೈರಲ್ ಆಗಿದೆ. ಹೀಗಾಗಿ, ಸೋಷಿಯಲ್ ಮೀಡಿಯಾದಲ್ಲಿ ಮಾನ್ಯತಾ ಟೆಕ್ಪಾರ್ಕ್ ಟ್ರೆಂಡಿಂಗ್ನಲ್ಲಿದೆ. ಮಾನ್ಯತಾ ಟೆಕ್ ಪಾರ್ಕ್‌ಗೆ ಹೋಗುವ ರಸ್ತೆಗಳು ಜಲಾವೃತವಾಗಿವೆ. ನಾಳೆ ಕೂಡ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಹೆಣ್ಣೂರು ಬಾಗಲೂರು ಮುಖ್ಯ ರಸ್ತೆ ಹಾಗೂ ವಡ್ಡರಪಾಳ್ಯ ಸಾಯಿ ಬಡಾವಣೆಯ ರಸ್ತೆ ಸಂಪೂರ್ಣ ಜಲಾವೃತ ಆಗಿದ್ದು, ಪಾಲಿಕೆ ವಿರುದ್ಧ ಜನ ಆಕ್ರೋಶಗೊಂಡಿದ್ದಾರೆ. ಇತ್ತ ಯಶವಂತಪುರ ಠಾಣಾ ವ್ಯಾಪ್ತಿಯ ರಾಜಕುಮಾರ್ ಸಮಾಧಿ ರಸ್ತೆಯಲ್ಲಿ (ಔಟರ್ ರಿಂಗ್) ಮರ ಬಿದ್ದಿರುವ ಕಾರಣ ಎರಡು ಬದಿಯ ಸಂಚಾರ ಸ್ಥಗಿತವಾಗಿದೆ.
ನಮ್ಮ ಸಿಬ್ಬಂದಿಗಳು ತೆರವು ಕಾರ್ಯಾಚರಣೆಯಲ್ಲಿ ನಿರತರಾಗಿರುತ್ತಾರೆ. ತುಮಕೂರು ರಸ್ತೆಯಿಂದ ಮೈಸೂರು ರಸ್ತೆ ಕಡೆಗೆ ಹೋಗುವ ವಾಹನ ಸವಾರರು SRS ರಸ್ತೆ & ಸುರಾನಾ ಕಾಲೇಜ್ ರಸ್ತೆಯನ್ನು ಬಳಸಲು ಕೋರಲಾಗಿದೆ ಎಂದು ಸಂಚಾರ ಪೊಲೀಸರು ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಬೆಂಗಳೂರಿಗೆ ದೊಡ್ಡ ಮಳೆಯನ್ನೇ ಹೊತ್ತುತಂದಿದೆ. ಭಾನುವಾರ ಸಂಜೆಯಿಂದಲೂ ಶುರುವಾಗಿದ್ದ ಮಳೆ ಸೋಮವಾರ ಸಂಜೆವರೆಗೂ ಒಂದೇ ಸಮನೇ ಧಾರಾಕಾರವಾಗಿ ಸುರಿದಿದೆ. ಆಗೋಮ್ಮೆ ಈಗೊಮ್ಮೆ ಬಿಡುವು ಕೊಟ್ಟರೂ ಬರೋಬ್ಬರಿ 59.8 ಮಿ.ಮೀ ಮಳೆಯಾಗಿದೆ. ಅದರಲ್ಲೂ ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ 80.01 ಮಿ.ಮೀ ಮಳೆ ದಾಖಲಾಗಿದೆ.
Leave a Comment