ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗಾವಕಾಶ; 267 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Bank Of Baroda SO Recruitment 2025
Spread the love

ನ್ಯೂಸ್ ಆ್ಯರೋ: ದೇಶದ ಪ್ರತಿಷ್ಠಿತ ಬ್ಯಾಂಕ್ ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿಯಿರುವ 1,267 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಗ್ರಿಕಲ್ಚರ್‌ ಮಾರ್ಕೆಟಿಂಗ್‌ ಆಫೀಸರ್‌, ಅಗ್ರಿಕಲ್ಚರ್‌ ಮಾರ್ಕೆಟಿಂಗ್‌ ಮ್ಯಾನೇಜರ್‌, ಮ್ಯಾನೇಜರ್‌-ಸೇಲ್ಸ್‌ ಸೇರಿದಂತೆ ವಿವಿಧ ಹುದ್ದೆಗಳು ಖಾಲಿಯಿದ್ದು, ಪದವಿ ಹಾಗೂ ಸ್ನಾತಕೋತ್ತರ ಪದವಿ ಪಾಸಾಗಿರುವ ಅಭ್ಯರ್ಥಿಗಳು ಜನವರಿ 17 ರೊಳಗೆ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ:

  • ಇಲಾಖೆಯ ಹೆಸರು : ಬ್ಯಾಂಕ್ ಆಫ್ ಬರೋಡಾ
  • ಹುದ್ದೆಗಳ ಹೆಸರು : ಸ್ಪೆಷಲಿಸ್ಟ್ ಆಫೀಸರ್, ಮ್ಯಾನೇಜರ್‌, ಅಗ್ರಿಕಲ್ಚರ್‌ ಮಾರ್ಕೆಟಿಂಗ್‌ ಆಫೀಸರ್‌, ಅಗ್ರಿಕಲ್ಚರ್‌ ಮಾರ್ಕೆಟಿಂಗ್‌ ಮ್ಯಾನೇಜರ್‌, ಮ್ಯಾನೇಜರ್‌-ಸೇಲ್ಸ್‌ ಸೇರಿದಂತೆ ವಿವಿಧ ಹುದ್ದೆಗಳು .
  • ಒಟ್ಟು ಹುದ್ದೆಗಳು : 1,267

ಅಭ್ಯರ್ಥಿಗೆ ಇರಬೇಕಾದ ವಿದ್ಯಾರ್ಹತೆ:

  • ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಪಿಜಿಡಿಎಂ, ಬಿ.ಇ, ಬಿ.ಟೆಕ್‌, ಎಂಸಿಎ, ಎಂ.ಎಸ್‌ಸಿ, ಪಿಜಿಡಿಎಂ ಪೂರ್ಣಗೊಳಿಸಿರಬೇಕು.

ವಯೋಮಿತಿ:

  • ಬ್ಯಾಂಕ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳ ಕನಿಷ್ಠ ವಯಸ್ಸು 22 ವರ್ಷ ಹಾಗೂ ಗರಿಷ್ಠ ವಯಸ್ಸು 45 ವರ್ಷ ದಾಟಿರಬಾರದು. ಮೀಸಲಾತಿಗೆ ಅನುಗುಣವಾಗಿ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ ಹಾಗೂ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ:

  • ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು 600 ರೂ ಹಾಗೂ ಎಸ್‌ಸಿ, ಎಸ್‌ಟಿ, ಪಿಡಬ್ಲ್ಯುಡಿ ಹಾಗೂ ಮಹಿಳಾ ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17 ಜನವರಿ 2025

ಅಧಿಕೃತ ಮಾಹಿತಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: https://www.bankofbaroda.in/-/media/Project/BOB/CountryWebsites/India/Career/2024/24-12/Advertisement-Regular-27-12-2024-26-20.pdf

Leave a Comment

Leave a Reply

Your email address will not be published. Required fields are marked *

error: Content is protected !!