ಕನ್ನಡಿಗನಿಗೆ ಬಿಸಿಸಿಐ ಬಿಗ್ ಶಾಕ್; ಮೆಗಾ ಟೂರ್ನಿಯಿಂದ ಕೆ.ಎಲ್ ರಾಹುಲ್ ಔಟ್
ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿ ಆರಂಭಕ್ಕೆ ಇನ್ನೇನು ಒಂದೂವರೆ ತಿಂಗಳು ಮಾತ್ರ ಬಾಕಿ ಇದೆ. ಈ ಮೆಗಾ ಟೂರ್ನಿಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಶುರುವಾಗಿವೆ. ಇನ್ನೂ 3 ದಿನದಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಎಲ್ಲಾ ತಂಡಗಳು ಪ್ರಕಟಿಸಬೇಕು ಎಂದು ಐಸಿಸಿ ಗಡುವು ನೀಡಿದೆ.
ಇನ್ನು, ಬಿಸಿಸಿಐ ಕೂಡ ಬಲಿಷ್ಠ ಟೀಮ್ ಇಂಡಿಯಾ ಪ್ರಕಟ ಮಾಡಬೇಕಿದೆ. ಇದರ ಭಾಗವಾಗಿ ಶನಿವಾರ ಬಿಸಿಸಿಐ ಸೆಲೆಕ್ಷನ್ ಕಮಿಟಿ ಸಭೆ ನಡೆಸಲಿದೆ. ಟೀಮ್ ಇಂಡಿಯಾದಲ್ಲಿ ಸ್ಥಾನಕ್ಕಾಗಿ ಸಾಕಷ್ಟು ಆಟಗಾರರ ಮಧ್ಯೆ ಪೈಪೋಟಿ ನಡೆಯುತ್ತಿದೆ. ಮುಖ್ಯ ಕೋಚ್ ಗಂಭೀರ್ ಕೃಪೆ ಯಾರ ಮೇಲಿದೆ? ಅನ್ನೋ ಚರ್ಚೆ ಶುರುವಾಗಿದೆ.
ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾ ಪ್ಲೇಯಿಂಗ್ ಎಲೆವೆನ್ ಆಯ್ಕೆ ಮಾಡೋದು ಅಷ್ಟು ಸುಲಭವಲ್ಲ. ಇದಕ್ಕಾಗಿ ಬಿಸಿಸಿಐ ಸೆಲೆಕ್ಷನ್ ಕಮಿಟಿ ಮತ್ತು ಗೌತಮ್ ಗಂಭೀರ್ ಮಹತ್ವದ ನಿರ್ಧಾರ ಕೈಗೊಳ್ಳಬೇಕಿದೆ.
ಏಕದಿನ ವಿಶ್ವಕಪ್ ಫೈನಲ್ ನಂತರ ಟೀಮ್ ಇಂಡಿಯಾ ಕೇವಲ 6 ಏಕದಿನ ಪಂದ್ಯಗಳನ್ನು ಆಡಿದೆ. . ಶ್ರೀಲಂಕಾ ವಿರುದ್ಧ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡದ ಕಾರಣ ಇವರನ್ನು ಸರಣಿ ಮಧ್ಯದಲ್ಲೇ ಕೈಬಿಡಲಾಗಿತ್ತು. 2023ರ ನವೆಂಬರ್ 19ರಂದು ಆಸ್ಪ್ರೇಲಿಯಾ ವಿರುದ್ಧದ ಪಂದ್ಯದಲ್ಲೂ ಕೆ.ಎಲ್ ರಾಹುಲ್ ಉತ್ತಮ ಪ್ರದರ್ಶನ ನೀಡಿರಲಿಲ್ಲ.
ಇತ್ತ ಯಶಸ್ವಿ ಜೈಸ್ವಾಲ್ ಏಕದಿನ ತಂಡದಲ್ಲಿ ಸ್ಥಾನ ಪಡೆಯುವ ಅತ್ಯುತ್ತಮ ಅವಕಾಶ ಹೊಂದಿದ್ದಾರೆ. ಇವರು ಅಗ್ರ ನಾಲ್ಕರಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ. ಒಂದು ವೇಳೆ ಪಂತ್ ಮೊದಲ ವಿಕೆಟ್ ಕೀಪರ್ ಆಯ್ಕೆಯಾದರೆ, ರಾಹುಲ್ ಬೆಂಚ್ ಕಾಯಲೇಬೇಕು.
Leave a Comment