ಬೆಳ್ತಂಗಡಿಯಲ್ಲೊಂದು ಹೃದಯ ವಿದ್ರಾವಕ ಘಟನೆ; ಆಯುಧ ಪೂಜೆ ವೇಳೆ ಯುವಕ ನಿಧನ

young man died
Spread the love

ನ್ಯೂಸ್ ಆ್ಯರೋ: ಇತ್ತೀಚಿನ ದಿನಗಳಲ್ಲಿನ ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತ ಹೆಚ್ಚುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿ. ಬೆಳ್ತಂಗಡಿಯಲ್ಲಿ ಯುವಕನೊಬ್ಬ ಶುಕ್ರವಾರ ನಡೆದ ಆಯಧ ಪೂಜೆಯ ಸಂದರ್ಭದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಅತ್ತಾಜೆ ರಮೇಶ್ ಭಟ್ ಮತ್ತು ಶಾರದ ದಂಪತಿಯ ಪುತ್ರ ಆದಿತ್ಯ ಭಟ್ (29) ಮೃತ ದುರ್ದೈವಿ. ಆದಿತ್ಯ ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ನಡೆದ ಆಯುಧ ಪೂಜಾ ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.

ನಂತರ, ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಹೃದಯ ಸ್ತಂಭನಕ್ಕೆ ಕಾರಣವಾಯಿತು.

ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಆದಿತ್ಯ ಅವರು ಜರ್ಮನಿಯಲ್ಲಿ ಸ್ವಂತ ಸ್ಟಾರ್ಟಪ್ ನಡೆಸುತ್ತಿದ್ದರು. ಅವರು ತಂದೆ-ತಾಯಿ, ಸಹೋದರಿ ಮತ್ತು ಬಂಧು ಬಳಗವನ್ನು ಅಗಲಿದ್ದಾರೆ. ಆದಿತ್ಯ ಭಟ್ ಅವರಿಗೆ ಇತ್ತೀಚಿಗೆ ನಿಶ್ಚಿತಾರ್ಥವಾಗಿತ್ತು. ಡಿಸಂಬರ್‌ನಲ್ಲಿ ಮದುವೆಯೂ ನಿಶ್ಚಯವಾಗಿತ್ತು ಎನ್ನಲಾಗಿದೆ. ಮನೆಯಲ್ಲಿ ಮದುವೆಯ ಸಂಭ್ರಮ ಜೋರಾಗಿತ್ತು.ಎಲ್ಲವೂ ಚೆನ್ನಾಗಿ ನಡೆಯುತ್ತಿದೆ ಎನ್ನುವಾಗ ಈ ದುರ್ಘಟನೆ ಸಂಭವಿಸಿದೆ.

Leave a Comment

Leave a Reply

Your email address will not be published. Required fields are marked *

error: Content is protected !!