ಮುಡಾ ನಿವೇಶನ ಹಂಚಿಕೆ ಪ್ರಕರಣ;ಸಿಎಂ ಸಿದ್ದರಾಮಯ್ಯಗೆ ಬಿಗ್​ ರಿಲೀಫ್

muda-case
Spread the love

ನ್ಯೂಸ್ ಆ್ಯರೋ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ.

ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್​ ರಿಲೀಫ್​ ಸಿಕ್ಕಿದೆ.

ಇನ್ನು ತೀರ್ಪು ಪ್ರಕಟವಾಗುತ್ತಿದ್ದಂತೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ದೂರುದಾರ ಸ್ನೇಹಮಯಿ ಕೃಷ್ಣ, ಕಾನೂನು ಹೋರಾಟ ಮುಂದುವರಿಸುತ್ತೇವೆ. ಹೈಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುತ್ತೇನೆ.

ಹೈಕೋರ್ಟ್ ಆದೇಶ ಪ್ರತಿ ಸಿಕ್ಕಿದ ಕೂಡಲೇ ಸುಪ್ರೀಂಗೆ ಮೇಲ್ಮನವಿ ಸಲ್ಲಿಸುವೆ. ಲೋಕಾಯುಕ್ತ ತನಿಖೆ ಬಗ್ಗೆ ನಮಗೆ ನಂಬಿಕೆ ಇಲ್ಲ ಎಂದು ಹೇಳಿದರು.

Leave a Comment

Leave a Reply

Your email address will not be published. Required fields are marked *