113 ವರ್ಷದ ಸಾಲು ಮರದ ತಿಮ್ಮಕ್ಕ ಆರೋಗ್ಯ ಸ್ಥಿತಿ ಗಂಭೀರ; ಪುತ್ರ ಉಮೇಶ್ ಹೇಳಿದ್ದೇನು ಗೊತ್ತಾ?
ನ್ಯೂಸ್ ಆ್ಯರೋ: ಲಕ್ಷಾಂತರ ಮರ ನೆಟ್ಟು ವೃಕ್ಷ ಮಾತೆ ಎಂದೇ ಖ್ಯಾತಿಯಾಗಿರೋ 113 ವರ್ಷದ ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುರೋ ಇವರನ್ನು ಚಿಕಿತ್ಸೆಗಾಗಿ ಜಯನಗರದ ಅಪೋಲೊ ಆಸ್ಪ್ರತೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಇನ್ನು, ತಿಮ್ಮಕ್ಕ ಅವರ ಆರೋಗ್ಯ ಸ್ಥಿತಿ ಕುರಿತ ಮಗ ಉಮೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯ ಸುಧಾರಿಸಿದೆ. ನಾಳೆ ಅಥವಾ ನಾಡಿದ್ದು ಡಿಸ್ಚಾರ್ಜ್ ಮಾಡಲಿದ್ದೇವೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ ಎಂದರು.
ಈ ಹಿಂದೆ ಕೂಡ ಸಾಲು ಮರದ ತಿಮ್ಮಕ್ಕ ಇದೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಅದಕ್ಕೂ ಮುನ್ನ ಬೇಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇತ್ತೀಚೆಗಷ್ಟೇ ಬೆಂಗಳೂರಿಗೆ ಬಂದಿದ್ದಾರೆ. ಬೆಟ್ಟದ ಬೇಲೂರು ಪ್ರದೇಶದ ತಂಪಾದ ವಾತಾವರಣದಿಂದ ಇವರ ಆರೋಗ್ಯದಲ್ಲಿ ಏರುಪೇರು ಆಗಿತ್ತು.
Leave a Comment