ಗೃಹಲಕ್ಷ್ಮಿ ಹಣದಲ್ಲಿ ಮಗನಿಗೆ ಬೈಕ್ ಕೊಡಿಸಿದ ತಾಯಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ
ನ್ಯೂಸ್ ಆ್ಯರೋ: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಒಂದಾಗಿದೆ. ಈ ಯೋಜನೆಯಡಿ ಪ್ರತಿ ಮನೆಯ ಯಜಮಾನಿಗೂ 2,000 ರೂಪಾಯಿ ನೀಡಲಾಗುತ್ತಿದ್ದು, ಇದರಿಂದ ಮನೆ ಖರ್ಚುಗಳನ್ನು ನಿಭಾಯಿಸುತ್ತಿದ್ದಾರೆ. ಹಾಗೆಯ ಇದೀಗ ಇದೇ ಹಣದಿಂದ ತಾಯಿಯೊಬ್ಬರು ಮಗನಿಗೆ ಬೈಕ್ ಕೂಡಿಸಿದ ಘಟನೆ ನಡೆದಿದೆ.
ಸಿದ್ದರಾಮಯ್ಯ ಸರ್ಕಾರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆಯಿಂದ ಬಂದಂತಹ ಹಣವು ಹಲವಾರು ಮಹಿಳೆಯರಿಗೆ ವಿವಿಧ ರೀತಿಯಲ್ಲಿ ಉಪಯೋಗ ಆಗಿರುವ ಉದಾಹತಣೆಗಳು ಇವೆ. ಇತ್ತೀಚೆಗಷ್ಟೇ ಗೃಹಲಕ್ಷ್ಮೀ ಹಣದಿಂದ ಮಹಿಳೆಯೊಬ್ಬರು ಫ್ರಿಡ್ಜ್ ಖರೀದಿ ಮಾಡಿದ್ದು, ಮತ್ತೊಬ್ಬ ಮಹಿಳೆ ಗೃಹಲಕ್ಷ್ಮಿ ಹಣದಿಂದ ಫ್ಯಾನ್ಸಿ ಸ್ಟೋರ್ ಆರಂಭ ಮಾಡಿದ್ದರು.
ಅಜ್ಜಿಯೊಬ್ಬರು ಗೃಹಲಕ್ಷ್ಮಿ ಹಣದಲ್ಲಿ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿದ್ದು. ಅಲ್ಲದೆ, ಇದೇ ಯೋಜನೆಯ ಹಣದಿಂದ ಮಹಿಳೆಯೊಬ್ಬರು ತಮ್ಮ ಪತಿಯ ಕಣ್ಣಿನ ಶಸ್ತ್ರಚಿಕಿತ್ಸೆಯನ್ನು ಮಾಡಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿತ್ತು. ಇದೀಗ ಮತ್ತೆ ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಹಣದಿಂದ ಮಹಿಳೆಯೋಬ್ಬರು ತನ್ನ ಮಗನಿಗೆ ಬೈಕ್ ಬುಕ್ ಮಾಡಿದ ಘಟನೆ ನಡೆದಿದೆ.
ಬೆಳಗಾವಿಯ ಅನಿತಾ ಎಂಬ ಬಡ ಮಹಿಳೆಯೊಬ್ಬರಿಗೆ ಗೃಹಲಕ್ಷ್ಮಿ ಹಣ ನೆರವಾಗಿದ್ದು, ಅವರು ಆ ಹಣದಿಂದ ತಮ್ಮ ಪತಿಯ ಕಣ್ಣಿನ ಆಪರೇಷನ್ ಮಾಡಿಸಿದ್ದರು. ಇದೀಗ ಇದೇ ಬೆಳಗಾವಿಯಲ್ಲಿ ಮಹಿಳೆಯೊಬ್ಬರು ಈ ಗೃಹ ಲಕ್ಷ್ಮಿ ಹಣದಿಂದ ತನ್ನ ಪುತ್ರನಿಗೆ ಬೈಕ್ ಬುಕ್ ಮಾಡಿರುವ ಘಟನೆ ನಡೆದಿದೆ.
ಕೌಜಲಗಿ ಗ್ರಾಮದ ಬಾಗವ್ವಾ ಸಣ್ಣಕ್ಕಿ ಎಂಬ ಮಹಿಳೆ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಪುತ್ರ ರಮೇಶ ನೀಲಪ್ಪನಿಗೆ ಬೈಕ್ ಖರೀದಿಸಲು ಮುಂಗಡವಾಗಿ ಕಟ್ಟಿದ್ದಾರೆ. ಇದರಿಂದ ದ್ವಿಚಕ್ರ ವಾಹನ ಕೊಳ್ಳಲು ತಾಯಿ ಗೃಹಲಕ್ಷ್ಮಿ ಹಣ ನೀಡಿರುವುದಕ್ಕೆ ಮತ ರಮೇಶ್ ಸಂತಸಗೊಂಡಿದ್ದಾನೆ.
ಇನ್ನು ಈ ವಿಚಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗಮನಕ್ಕೆ ಬಂದಿದ್ದು, ಕೂಡಲೇ ಬಾಗವ್ವ ಸಣ್ಣಕ್ಕಿ ಅವರಿಗೆ ಪತ್ರ ಬರೆದು ಮಹಿಳೆಯ ಕಾರ್ಯಕ್ಕೆ ಶ್ಲಾಘಿಸಿದ್ದಾರೆ. ಅಲ್ಲದೇ ತಮ್ಮ ತಾಯಿಯ ಗೃಹ ಲಕ್ಷ್ಮಿ ಹಣದಿಂದಲೇ ಹೊಸ ಬೈಕ್ ಕೊಳ್ಳುತ್ತಿರುವ ರಮೇಶನಿಗೆ ಶುಭಾಶಯ ಕೋರಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ತಮ್ಮ ಮಗನಾದ ರಮೇಶ್ ನೀಲಪ್ಪ ಸಣ್ಣಕ್ಕಿ ಅವರಿಗೆ ಬೈಕ್ ಖರೀದಿಸಲು ಬಾಗವ್ವ ನೀಡಿದ್ದಾರೆ. ಈ ವಿಷಯ ಕೇಳಿ ಇಲಾಖೆಯ ಸಚಿವೆಯಾದ ನನಗೆ ತುಂಬಾ ಸಂತಸ ತಂದಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
Leave a Comment