ಮೈತ್ರಿ ನಾಯಕರಿಗೆ ಬಿಗ್ ಶಾಕ್; ಪಕ್ಷ ಬದಲಿಸಿ ಕೈ ಕೊಟ್ಟ ಸಿಪಿ ಯೋಗೇಶ್ವರ್
ನ್ಯೂಸ್ ಆ್ಯರೋ: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪೈಕಿ ಚನ್ನಪಟ್ಟಣ ಕ್ಷೇತ್ರದ ಚುನಾವಣೆ ಹೈ ವೋಲ್ಟೇಜ್ನಿಂದ ಕೂಡಿದೆ. ಮಾಜಿ ಎಂಎಲ್ಸಿ, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಕೈ ಟಿಕೆಟ್ ಇವರಿಗೆ ನೀಡುವುದು ಪಕ್ಕಾ ಆಗಿದೆ.
ಇಂದು (ಅ.23) ಸಂಜೆ ಟಿಕೆಟ್ ಘೋಷಣೆಯಾಗುವ ಸಾಧ್ಯತೆ ಇದೆ. ಇನ್ನು ಸಿಪಿ ಯೋಗೇಶ್ವರ್ ಅವರ ರಾಜಕೀಯ ಹಾದಿ ವರ್ಣ ರಂಜಿತದಿಂದ ಕೂಡಿದೆ. ಸಿಪಿ ಯೋಗೇಶ್ವರ್ ಏಳು ಚುನಾವಣೆಗಳನ್ನು ಎದುರಿಸಿದ್ದು, ನಾಲ್ಕು ಬಾರಿ ಗೆಲವು ಸಾಧಿಸಿದ್ದಾರೆ. ಗೆದ್ದ ನಾಲ್ಕೂ ಬಾರಿಯೂ ಬೇರೆ ಬೇರೆ ಚಿಹ್ನೆಗಳಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.
ಆಡಳಿತಾರೂಢ ಕಾಂಗ್ರೆಸ್ ಯೋಗೇಶ್ವರ್ ಅವರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಡಿಸಿಎಂ ಡಿಕೆ ತಂತ್ರಗಾರಿಕೆ ಫಲ ಕೊಟ್ಟಿದೆ. ಯೋಗೇಶ್ವರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಬಿಜೆಪಿ ನಾಯಕರು ಕೊನೆ ಕ್ಷಣದವರೆಗೂ ನಡೆಸಿದ ಪ್ರಯತ್ನ ವಿಫಲವಾಗಿದೆ.
ಮಂಗಳವಾರ ತಡರಾತ್ರಿ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ. ಅದರಂತೆ ಇಂದು ಕಾಂಗ್ರೆಸ್ ಗೆ ಸೇರ್ಪಡೆ ಗೊಂಡಿದ್ದಾರೆ. ಈ ಮೂಲಕ ಬಿಜೆಪಿ ಕಾಂಗ್ರೆಸ್ ನಾಯಕರಿಗೆ ಬಿಗ್ ಶಾಕ್ ನೀಡಿದ್ದಾರೆ.
Leave a Comment