ಅತ್ಯಾಚಾರ ಕೇಸ್‌ ನಲ್ಲಿ ಸಿಲುಕಿದ ಶಾಸಕ ಮುನಿರತ್ನಗೆ ಶಾಕ್; ಕೋರ್ಟ್ ನಿಂದ​ ಮಹತ್ವದ ಆದೇಶ

BJP MLA munirathna
Spread the love

ನ್ಯೂಸ್ ಆ್ಯರೋ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದೆ. ಇಂದು(ಅ. 05) ಎಸ್​ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ , ಮುನಿರತ್ನಗೆ 14 ದಿನ(ಅ.19ರ ವರೆಗೆ) ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಬಿಜೆಪಿ ಶಾಸಕ ಮುನಿರತ್ನ ಎಸ್​ಐಟಿ ಕಸ್ಟಡಿ ಇಂದು ಅಂತ್ಯವಾಗಿದೆ. ಈ ಹಿನ್ನೆಲೆ ಎಸ್​ಐಟಿ ಅಧಿಕಾರಿಗಳು ಮುನಿರತ್ನ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರು ಪಡಿಸಿದ್ದು, ಮತ್ತೆ ಮುನಿರತ್ನರನ್ನು ಕಸ್ಟಡಿಗೆ ನೀಡುವಂತೆ ಎಸ್​ಐಟಿ ಅಧಿಕಾರಿಗಳು ಕೋರ್ಟ್​ಗೆ ಮನವಿ ಮಾಡಿದರು. ಆದ್ರೆ, ಕೋರ್ಟ್​, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಇನ್ನು ಮುನಿರತ್ನಗೆ ಮನೆ ಊಟಕ್ಕೆ ಅವಕಾಶ ಮಾಡಿಕೊಡುವಂತೆ ವಕೀಲರು ಕೋರ್ಟ್​​ಗೆ ಮನವಿ ಮಾಡಿದರು. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಮನವಿ ಮಾಡಲು ಕೋರ್ಟ್​ ಸೂಚಿಸಿದ್ದು, ಒಂದು ವೇಳೆ ಅನುಮತಿ ನೀಡದಿದ್ದರೆ ಕೋರ್ಟ್​ನಲ್ಲಿ ಅರ್ಜಿ ಹಾಕಿ ಎಂದು ಹೇಳಿದೆ.

ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎನ್ ಮುನಿರತ್ನ ಅವರನ್ನು ಶುಕ್ರವಾರ ಬಂಧಿಸಲಾಗಿತ್ತು. ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ರೆಸಾರ್ಟ್‌ನಲ್ಲಿ ಘಟನೆ ನಡೆದಿದೆ ಎಂದು ಆರೋಪಿಸಿ 40 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಬಂಧನಕ್ಕೊಳಪಡಿಸಲಾಗಿತ್ತು.

Leave a Comment

Leave a Reply

Your email address will not be published. Required fields are marked *

error: Content is protected !!