ವಕ್ಫ್ ವಿರುದ್ಧ ಸಿಡಿದೆದ್ದ ಬಿಜೆಪಿ; ರಾಜ್ಯಾದ್ಯಂತ ಪ್ರತಿಭಟನೆ
ನ್ಯೂಸ್ ಆ್ಯರೋ: ವಕ್ಫ್ ನೋಟಿಸ್ಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ಕರ್ನಾಟಕದಾದ್ಯಂತ ‘ನಮ್ಮ ಭೂಮಿ, ನಮ್ಮ ಹಕ್ಕು ಘೋಷಣೆಯಡಿ’ ಪ್ರತಿಭಟನೆ ನಡೆಸುತ್ತಿದೆ. ಕೋಲಾರದಿಂದ ಮಂಗಳೂರಿನವರೆಗೆ, ಬೆಂಗಳೂರಿನಿಂದ ವಿಜಯಪುರದವರೆಗ ವಕ್ಫ್ ವಿವಾದ ವಿರೋಧಿಸಿ ಪ್ರತಿಭಟನೆಗಳಿದಿದೆ. ಕೂಡಲೇ ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.
“ರದ್ದಾಗಲಿ, ವಕ್ಫ್ ಬೋರ್ಡ್ ರದ್ದಾಗಲಿ” ಎಂಬ ಘೋಷಣೆ ಬಿಜೆಪಿ ಪ್ರತಿಭಟನೆ ವೇಳೆ ಎಲ್ಲೆಡೆ ಕೇಳಿಬಂತು. ರೈತರ ಜಮೀನು, ದೇವಸ್ಥಾನ ಸೇರಿದಂತೆ ಹಲವು ಆಸ್ತಿಗಳಲ್ಲಿ ವಕ್ಫ್ ಬೋರ್ಡ್ ಆಸ್ತಿ ಅಂತಾ ನಮೂದಾಗುತ್ತಿರುವುದನ್ನು ವಿರೋಧಿಸಿ ಬಿಜೆಪಿ ರಾಜ್ಯದ ಹಲವಡೆ ಪ್ರತಿಭಟನೆ ನಡೆಸಿತು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಮ್ಮ ಭೂಮಿ ನಮ್ಮ ಹಕ್ಕು ಘೋಷಣೆಯಡಿ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಲಾಯಿತು. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ನಾಯಕರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಅತ್ತ ಮೈಸೂರಿನಲ್ಲೂ ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಪ್ರತಿಭಟನೆ ನಡೀತು. ಮಂಗಳೂರಿನಲ್ಲಿ ಗಾಂಧಿಪ್ರತಿಮೆ ಬಳಿ ಸ್ಥಳೀಯ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ಕೊಡಗಿನಲ್ಲಿ ಪ್ರತಾಪ್ ಸಿಂಹ ಸೇರಿ ಹಲವು ನಾಯಕರು ಸರ್ಕಾರದ ವಿರುದ್ಧ ಕಿಡಿಕಾರಿದರು.
ಇನ್ನು ಮಂಡ್ಯದಲ್ಲಿ ಮಾಜಿ ಸಂಸದೆ ಸುಮಲತಾ ಅಂಬರೀಶ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ಲೋಕಸಭೆ ಚುನಾವಣೆ ಬಳಿಕ ಮೊದಲ ಬಾರಿಗೆ ಸುಮಲತಾ ಬಿಜೆಪಿ ಹೋರಾಟದಲ್ಲಿ ಕಾಣಿಸಿಕೊಂಡರು.
ಬಿಜೆಪಿ ನಾಯಕರ ವಕ್ಫ್ ವಿರುದ್ಧದ ಹೋರಾಟಕ್ಕೆ ಕಾಂಗ್ರೆಸ್ ನಾಯಕರು ಕಿಡಿ ಕಾರಿದ್ದಾರೆ. ಪಬ್ಲಿಸಿಟಿಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದ್ದಾರೆ. ಕ್ರೆಡಿಟ್‌ಗಾಗಿ ಹೋರಾಟ ನಡೆದಿದೆ ಅಂತಾ ಎಂ.ಬಿ ಪಾಟೀಲ್ ವ್ಯಂಗ್ಯವಾಡಿದ್ದಾರೆ. ಹೋರಾಟ ಮಾಡದೇ ಇದ್ದರೆ ಅವರಿಗೆ ಹೇಗೆ ಸ್ಥಾನಮಾನ ಸಿಗುತ್ತದೆ ಎಂದು ಚಲುವರಾಯಸ್ವಾಮಿ ಕೂಡಾ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
Leave a Comment