ಕಾಂತಾರ ಚಿತ್ರದ ಕಲಾವಿದರು ತೆರಳುತ್ತಿದ್ದ ಬಸ್ ಪಲ್ಟಿ; 6 ಜನರಿಗೆ ಗಂಭೀರ ಗಾಯ !
ನ್ಯೂಸ್ ಆ್ಯರೋ: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ನಟಿಸುತ್ತಿರುವ ಕಲಾವಿದರ ಬಸ್ ಅಪಘಾತ ಆಗಿದೆ. ಶೂಟಿಂಗ್ ಸಲುವಾಗಿ ಜ್ಯೂನಿಯರ್ ಕಲಾವಿದರನ್ನು ಕರೆದುಕೊಂಡು ಹೋಗಿದ್ದ ಮಿನಿ ಬಸ್ ಪಲ್ಟಿ ಆಗಿದೆ. ಕೊಲ್ಲೂರು ಸಮೀಪದ ಜಡ್ಕಳ್ ಬಳಿ ಪಲ್ಟಿಯಾದ ಬಸ್ನಲ್ಲಿ ಹಲವರು ಇದ್ದರು. ಆ ಪೈಕಿ 6 ಜನರಿಗೆ ಗಂಭೀರವಾಗಿ ಪೆಟ್ಟಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕರಾವಳಿ ಭಾಗದ ಬೇರೆ ಬೇರೆ ಲೊಕೇಷನ್ಗಳಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ಶೂಟಿಂಗ್ ಮಾಡಲಾಗುತ್ತಿದೆ. ವಿವಿಧ ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮುದೂರಿನಲ್ಲಿ ಚಿತ್ರೀಕರಣ ಮುಗಿಸಿ ಕೊಲ್ಲೂರಿಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕೊಲ್ಲೂರಿನ ಕಡೆಗೆ ಹೋಗುತ್ತಿದ್ದಾಗ ಮಿನಿ ಬಸ್ ಪಲ್ಟಿಯಾಯಿತು ಎಂದು ತಿಳಿದುಬಂದಿದೆ. 20 ಜ್ಯೂನಿಯರ್ ಕಲಾವಿದರು ಈ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು.
‘ಹೊಂಬಾಳೆ ಫಿಲ್ಮ್ಸ್’ ಮೂಲಕ ವಿಜಯ್ ಕಿರಗಂದೂರು ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಿಷಬ್ ಶೆಟ್ಟಿ ಅವರು ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯ ಭೂಮಿಕೆಯಲ್ಲೂ ನಟಿಸುತ್ತಿದ್ದಾರೆ. ‘ಕಾಂತಾರ’ ಚಿತ್ರದ ಪ್ರೀಕ್ವೆಲ್ ಆಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಡಿಬರುತ್ತಿದೆ. ಬಸ್ ಪಲ್ಟಿ ಆಗಿದ್ದರಿಂದ ಚಿತ್ರತಂಡದಲ್ಲಿ ಬೇಸರ ಆವರಿಸಿದೆ. ಅಪಘಾತಕ್ಕೆ ಒಳಗಾದವರ ಹೆಲ್ತ್ ಅಪ್ಡೇಟ್ ಇನ್ನಷ್ಟೇ ಸಿಗಬೇಕಿದೆ.
ಇತ್ತೀಚೆಗಷ್ಟೇ ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾದ ರಿಲೀಸ್ ಡೇಟ್ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. 2025ರ ಅಕ್ಟೋಬರ್ 2ರಂದು ಈ ಸಿನಿಮಾ ರಿಲೀಸ್ ಆಗಲಿದೆ ಎಂದು ಅವರು ತಿಳಿಸಿದ್ದರು.
Leave a Comment