6 ನಕ್ಸಲರ ಶರಣಾಗತಿಗೆ ರೋಚಕ ಟ್ವಿಸ್ಟ್; ಕೊನೇ ಕ್ಷಣದಲ್ಲಿ ಆಗಿದ್ದು ಏನು ?
ನ್ಯೂಸ್ ಆ್ಯರೋ: 6 ನಕ್ಸಲರ ಶರಣಾಗತಿಗೆ ಕೊನೆ ಕ್ಷಣದಲ್ಲಿ ಟ್ವಿಸ್ಟ್ ಸಿಕ್ಕಿದೆ. ಚಿಕ್ಕಮಗಳೂರಿನ ಬದಲಾಗಿ ಬೆಂಗಳೂರಲ್ಲಿ ಶರಣಾಗಲು ನಿರ್ಧರಿಸಿದ್ದಾರೆ. ಹೌದು. . .ಕಾಡೊಳಗೆ ಅಡಗಿ ಕುಳಿತು ಸದಾ ಸಂಘರ್ಷ, ರಕ್ತಚರಿತ್ರೆ ಬರೆಯುತ್ತಿದ್ದ ನಕ್ಸಲರು ಶಾಂತಿ ಮಂತ್ರ ಪಠಿಸಿದ್ದರು.
ಆರು ನಕ್ಸಲರಾದ ಶೃಂಗೇರಿ ತಾಲೂಕಿನ ಮುಂಡುಗಾರು ಗ್ರಾಮದ ಲತಾ, ಕಳಸ ತಾಲೂಕಿನ ಬಾಳೆಹೊಳೆ ಗ್ರಾಮದ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲಕದ ಸುಂದರಿ, ರಾಯಚೂರು ಮೂಲದ ಮಾರಪ್ಪ ಅರೋಳಿ, ವಸಂತ, ಎನ್.ಜೀಶಾ ಶರಣಾಗತಿಗೆ ನಿರ್ಧರಿಸಿದ್ದಾರೆ. ಅಂತೆಯೇ ಇಂದು ಬೆಳಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹಾಗೂ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಶರಣಾಗಲು ನಿರ್ಧರಿಸಿದ್ದರು.
ಶರಣಾಗಲು ನಿರ್ಧರಿಸಿದ್ದ ನಕ್ಸಲರನ್ನು ಈಗಾಗಲೇ ಕಾಡಿನಿಂದ ನಾಡಿಗೆ ಕರೆದುಕೊಂಡು ಬರಲಾಗಿದೆ. ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರ ಜೊತೆ ನಕ್ಸಲರು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸುತ್ತಿದ್ದರು. ಆದರೆ ಇವರು ಇದೀಗ ಸಿಎಂ ಸಿದ್ದರಾಮಯ್ಯರ ಮುಂದೆ ಶರಣಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ನಿರ್ಧರಿಸಿದ್ದಾರೆ.
ಅದಕ್ಕೆ ಸಿಎಂ ಕೂಡ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ. ನಾನೇ ನಡೆಸಿಕೊಡ್ತೇನೆ, ಬನ್ನಿ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಸಿಎಂ ಎದುರು ಶರಣಾಗಲು ನಕ್ಸಲರು ಬೆಂಗಳೂರಿನತ್ತ ಹೊರಟಿದ್ದಾರೆ.
Leave a Comment