ಹರಿಯಾಣ ವಿಧಾನಸಭಾ ಚುನಾವಣೆ: ವಿನೇಶ್ ಫೋಗಟ್ಗೆ ಭರ್ಜರಿ ಗೆಲುವು

ನ್ಯೂಸ್ ಆ್ಯರೋ: ಹರ್ಯಾಣದ ಜುಲಾನಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ 6000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿನ ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ಆಡಳಿತಾರೂಢ ಬಿಜೆಪಿ ಹರ್ಯಾಣ ವಿಧಾನಸಭೆಯಲ್ಲಿ ಬಹುಮತದ ಅಂಕವನ್ನು ದಾಟಿ 48 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ 37 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಅಕ್ಟೋಬರ್ 5 ರಂದು ನಡೆದ ಹರ್ಯಾಣ ಚುನಾವಣೆಯ ಮತ ಎಣಿಕೆ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಯಿತು. ಒಲಿಂಪಿಯನ್ ವಿನೇಶ್, ಬಿಜೆಪಿಯ ಕ್ಯಾಪ್ಟನ್ ಯೋಗೇಶ್ ಬೈರಾಗಿ, ಆಪ್ ಟಿಕೆಟ್ ನಲ್ಲಿ ಸ್ಪರ್ಧಿಸಿದ ಮಾಜಿ ವೃತ್ತಿಪರ ಕುಸ್ತಿಪಟು ಕವಿತಾ ದಲಾಲ್ ಅವರನ್ನು ಪರಾಭವಗೊಳಿಸಿದ್ದಾರೆ.
ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ವಿನೇಶ್, ಇದು ಜನರ ಹೋರಾಟವಾಗಿತ್ತು ಅವರು ಗೆದ್ದಿದ್ದಾರೆ. ನಾನು ಕೇವಲ ಮುಖವಾಗಿದ್ದೆ. ನನಗೆ ಸಿಕ್ಕಿರುವ ಪ್ರೀತಿ ಮತ್ತು ಗೌರವಕ್ಕೆ ನಾನು ಆಭಾರಿಯಾಗಿದ್ದೇನೆ ಎಂದಿದ್ದಾರೆ.
ಕಾಂಗ್ರೆಸ್ ಬಿಜೆಪಿಗಿಂತ ಹಿನ್ನಡೆಯಾಗಿರುವ ಬಗ್ಗೆ ಕೇಳಿದಾಗ “ಅಂತಿಮ ಫಲಿತಾಂಶಗಳಿಗಾಗಿ ಕಾಯೋಣ. ಕಾಂಗ್ರೆಸ್ ಖಂಡಿತವಾಗಿಯೂ ಗೆಲ್ಲುತ್ತದೆ.” ಎಂದಿದ್ದಾರೆ.
Leave a Comment