ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣ; ಕಟ್ಟಡ ಮಾಲೀಕ ಸೇರಿ ಇಬ್ಬರ ಬಂಧನ
ನ್ಯೂಸ್ ಆ್ಯರೋ:ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು, 6 ಕಾರ್ಮಿಕರು ಮೃತಪಟ್ಟಿದ್ದಾರೆ. ಈವರೆಗೆ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 13 ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಈನಡುವೆ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕ ಭ್‌ಉವನ್ ರೆಡ್ಡಿ ಹಾಗೂ ಗುತ್ತಿಗೆದಾರರ ಮುನಿಯಪ್ಪ ಎಂಬುವವರನ್ನು ಬಂಧಿಸಲಾಗಿದೆ.
ಕಟ್ಟಡ ಮಾಲೀಕ ಭುವನ್ ರೆಡ್ಡಿ 4 ಅಂತಸ್ತಗಳನ್ನು ಕಟ್ಟಲು ಮಾತ್ರ ಅನುಮತಿ ಪಡೆದಿದ್ದರು. ಆದರೆ 6 ಅಂತಸ್ತಗಳನ್ನು ನಿರ್ಮಾಣ ಮಾಡಲಾಗಿತ್ತು. ತಳಪಾಯದಲ್ಲಿ ಕಬ್ಬಿಣದ ರಾಡುಗಳನ್ನು ಸರಿಯಾಗಿ ಅಳವಡಿಕೆ ಮಾಡಿರಲಿಲ್ಲ. ಹಾಗೇ ಕಾಂಪೌಡ್ ನಿರ್ಮಾಣಕ್ಕೆ ಅಗೆಯಲಾಗಿದ್ದ ಗುಂಡಿಯಲ್ಲಿ ಅಪಾರ ಪ್ರಮಾಣದ ಮಳೆ ನೀರು ಶೇಖರಣೆಗೊಂಡು ಭೂಮಿ ಸಡಿಲವಾಗಿ ಕಟ್ಟಡ ಕುಸಿದಿದೆ. ಅವೈಜ್ಞಾನಿಕ ಕಟ್ಟಡ ನಿರ್ಮಾಣದಿಂದಾಗಿ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.
Leave a Comment