Farangipet : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ, ಮಾನವೀಯತೆ ಮೆರೆದ ಸ್ಥಳೀಯರು

20240816 103330
Spread the love

ನ್ಯೂಸ್ ಆ್ಯರೋ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾಗಿದ್ದು, ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಫರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ನಡೆದಿದೆ.

ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್‌ ಫರಂಗಿಪೇಟೆ ಹತ್ತನೇ ಮೈಲಿ ಕಲ್ಲು ಎಂಬಲ್ಲಿ ಪಲ್ಟಿಯಾಗಿದೆ.

ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ, ಚಾಲಕನ ಅತಿ ವೇಗದ ಚಾಲನೆ ಅಥವಾ ವಾಹನದಲ್ಲಿ ಕಂಡ ತಾಂತ್ರಿಕ ದೋಷಗಳಿಂದ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಘಟನೆಯಲ್ಲಿ ಗಾಯಗೊಂಡವರ ಹೆಸರು ವಿಳಾಸದ ಬಗ್ಗೆ ಸದ್ಯ ಯಾವುದೇ ಮಾಹಿತಿ ‌ಲಭಿಸಿಲ್ಲ.‌ ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಬಸ್ ಪಲ್ಟಿಯಾದ ಕೂಡಲೇ ಸ್ಥಳೀಯರು ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿ ಮಾನವೀಯತೆ ಮೆರೆದಿದ್ದು, ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Leave a Reply

Your email address will not be published. Required fields are marked *

error: Content is protected !!