ಕುಚಲಕ್ಕಿ ರಫ್ತಿನ ಮೇಲೆ 20 ಶೇಕಡಾ ಸುಂಕ ಹೆಚ್ಚಳ – ಅಗತ್ಯ ದಾಸ್ತಾನು ಮತ್ತು ಬೆಲೆ ಏರಿಕೆ ತಡೆಯಲು ಕೇಂದ್ರದ ಅಗತ್ಯ ಕ್ರಮ

ಕುಚಲಕ್ಕಿ ರಫ್ತಿನ ಮೇಲೆ 20 ಶೇಕಡಾ ಸುಂಕ ಹೆಚ್ಚಳ – ಅಗತ್ಯ ದಾಸ್ತಾನು ಮತ್ತು ಬೆಲೆ ಏರಿಕೆ ತಡೆಯಲು ಕೇಂದ್ರದ ಅಗತ್ಯ ಕ್ರಮ

ನ್ಯೂಸ್ ಆ್ಯರೋ‌ : ದೇಶೀಯ ಮಾರುಕಟ್ಟೆಯಲ್ಲಿ ಅಗತ್ಯ ದಾಸ್ತಾನು ಮತ್ತು ಬೆಲೆ ಏರಿಕೆಯನ್ನು ನಿಯಂತ್ರಣದಲ್ಲಿಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕುಚಲಕ್ಕಿ ರಫ್ತಿನ ಮೇಲೆ ಶೇ 20ರಷ್ಟು ಸುಂಕ ವಿಧಿಸಿದೆ.

ಆಗಸ್ಟ್ 25 ರಿಂದ ಜಾರಿಗೆ ಬರುವಂತೆ ರಫ್ತು ಸುಂಕ ವಿಧಿಸಲಾಗಿದ್ದು, ಅಕ್ಟೋಬರ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ಹಣಕಾಸು ಸಚಿವಾಲಯ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಿದೆ.

ಇನ್ನೂ ಲೆಟ್ ರಫ್ತು ಆದೇಶ (ಎಲ್‌ಇಒ) ಪಡೆಯದ ಮತ್ತು ಆಗಸ್ಟ್ 25ರ ಮೊದಲು ಮಾನ್ಯವಾದ ಲೆಟರ್ ಆಫ್ ಕ್ರೆಡಿಟ್ (ಎಲ್ಸಿ) ನಿಂದ ಬೆಂಬಲಿತವಾಗಿರುವ ಕಸ್ಟಮ್ಸ್ ಪೋರ್ಟ್ ಗಳಲ್ಲಿ ದಾಸ್ತಾನಿರುವ ಕುಚಲಕ್ಕಿ ಮೇಲೆ ಸುಂಕ ವಿನಾಯಿತಿ ಲಭ್ಯವಿರುತ್ತದೆ. ಬಾಸ್ಮತಿ ಅಕ್ಕಿಯನ್ನು ಹೊರತುಪಡಿಸಿ ಇತರ ಬಗೆಯ ಎಲ್ಲಾ ಅಕ್ಕಿ ರಫ್ತಿಗೆ ಕೇಂದ್ರ ಸರ್ಕಾರವು ಈಗಾಗಲೇ ನಿಷೇಧ ಹೇರಿದೆ.

ದೇಶದಿಂದ ರಫ್ತಾಗುವ ಒಟ್ಟು ಅಕ್ಕಿಯ ಸರಿಸುಮಾರು ಶೇ 25 ರಷ್ಟು ಬಾಸುಮತಿ ಅಲ್ಲದ ಬಿಳಿ ಅಕ್ಕಿಯಾಗಿದೆ. ಕಳೆದ ತಿಂಗಳು, ಮುಂಬರುವ ಹಬ್ಬದ ಋತುವಿನಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಪೂರೈಕೆ ಹೆಚ್ಚಿಸಲು ಮತ್ತು ಬೆಲೆ ಏರಿಕೆಯನ್ನು ನಿಯಂತ್ರಣದಲ್ಲಿಡಲು ಸರ್ಕಾರವು ಬಾಸ್ಮತಿಯೇತರ ಬಿಳಿ ಅಕ್ಕಿಯ ರಫ್ತನ್ನು ನಿಷೇಧಿಸಿತು.

ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಒಡೆದ ಅಕ್ಕಿಯನ್ನು ರಫ್ತು ಮಾಡುವುದನ್ನು ನಿಷೇಧಿಸಲಾಗಿತ್ತು. ಈ ಆರ್ಥಿಕ ವರ್ಷದ ಏಪ್ರಿಲ್-ಜೂನ್ ಅವಧಿಯಲ್ಲಿ, ಸುಮಾರು 15.54 ಲಕ್ಷ ಟನ್ ಬಾಸ್ಮತಿ ಅಲ್ಲದ ಬಿಳಿ ಅಕ್ಕಿಯನ್ನು ರಫ್ತು ಮಾಡಲಾಗಿದ್ದು, ಹಿಂದಿನ ವರ್ಷದ ಅವಧಿಯಲ್ಲಿ ಕೇವಲ 11.55 ಲಕ್ಷ ಟನ್ ರಫ್ತು ಮಾಡಲಾಗಿತ್ತು. ಆಹಾರ ಧಾನ್ಯಗಳ ಬೆಲೆ ಏರಿಕೆ ಮತ್ತು ಹೆಚ್ಚಿನ ರಫ್ತಿನ ಕಾರಣ ಬಾಸ್ಮತಿ ಅಲ್ಲದ ಬಿಳಿ ಅಕ್ಕಿ ರಫ್ತಿನ ಮೇಲೆ ನಿಷೇಧ ಹೇರಲಾಯಿತು.

Related post

ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ – ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್…!!

ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ…

ನ್ಯೂಸ್ ಆ್ಯರೋ : ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ…
ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ ಬಿದ್ದವನ ಕಥೆ ಮುಂದೇನಾಯ್ತು ಗೊತ್ತಾ?

ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ…

ನ್ಯೂಸ್‌ ಆ್ಯರೋ : ಈ ಆಧುನಿಕ ಯುಗದಲ್ಲಿ ಎಲ್ಲನೂ ತಂತ್ರಜ್ಞಾನದ ಮೂಲಕವೇ ನಡೆಯುತ್ತದೆ. ಇನ್ನೂ ಗೂಗಲ್ ಮುಖೇನಾ ನಮಗೆ ಬೇಕಾದ ಎಲ್ಲ ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದೆ. ಯಾವ ವಿಷಯದ ಬಗ್ಗೆನೂ…
ಕರ್ನಾಟಕ ಬಂದ್ : ಇಂದು ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿ – ವಿಪಕ್ಷಗಳ ಬೆಂಬಲ ಘೋಷಿಸಿದ ಬೊಮ್ಮಾಯಿ, ಕನ್ನಡ ಚಿತ್ರರಂಗದಿಂದ ಕಾವೇರಿಗಾಗಿ ಹೋರಾಟ

ಕರ್ನಾಟಕ ಬಂದ್ : ಇಂದು ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿ – ವಿಪಕ್ಷಗಳ…

ನ್ಯೂಸ್ ಆ್ಯರೋ : ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿ ವಿವಿಧ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಗುರುವಾರ ಮಧ್ಯರಾತ್ರಿಯಿಂದಲೇ ಬೆಂಗಳೂರು…

Leave a Reply

Your email address will not be published. Required fields are marked *