ಸಾವಿರಕ್ಕೂ ಅಧಿಕ ಉದ್ಯೋಗಿಗಳನ್ನು ವಜಾಗೊಳಿಸಿದ ಬೈಜುಸ್ – ನಷ್ಟದಲ್ಲಿರುವ ಕಂಪನಿ ಸಿಬ್ಬಂದಿ ವಜಾಕ್ಕೆ ಮನಮಾಡಿತೇ…!?

ಸಾವಿರಕ್ಕೂ ಅಧಿಕ ಉದ್ಯೋಗಿಗಳನ್ನು ವಜಾಗೊಳಿಸಿದ ಬೈಜುಸ್ – ನಷ್ಟದಲ್ಲಿರುವ ಕಂಪನಿ ಸಿಬ್ಬಂದಿ ವಜಾಕ್ಕೆ ಮನಮಾಡಿತೇ…!?

ನ್ಯೂಸ್ ಆ್ಯರೋ : ಭಾರತೀಯ ಕ್ರಿಕೆಟ್ ತಂಡದ ಪ್ರಾಯೋಜಕನಾಗಿರುವ ಎಡ್ಟೆಕ್ ಯೂನಿಕಾರ್ನ್ ಬೈಜುಸ್ 1,000ಕ್ಕೂ ಹೆಚ್ಚು ಉದ್ಯೋಗಿಗಳನ್ನ ವಜಾಗೊಳಿಸಿದ್ದು, ಅಚ್ಚರಿಗೆ ಕಾರಣವಾಗಿದೆ‌.

ಕಂಪನಿಯ ಎಂಜಿನಿಯರಿಂಗ್ ತಂಡದಲ್ಲಿ ಕೆಲಸ ಮಾಡುವ ಉದ್ಯೋಗಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದು, ‘ಇಂದು ಬೆಳಿಗ್ಗೆ, ಪ್ರತಿ ಟೆಕ್ ತಂಡದಲ್ಲಿ ಹಲವು ಜನರನ್ನ ಕೆಲಸದಿಂದ ವಜಾಗೊಳಿಸಲಾಗಿದೆ. ನನ್ನ ತಂಡದಲ್ಲೂ ಕಡಿತಗಳು ಸಂಭವಿಸಿದವು. ಒಟ್ಟಾರೆಯಾಗಿ, ಎಲ್ಲಾ ಎಂಜಿನಿಯರಿಂಗ್ ತಂಡಗಳಲ್ಲಿ 15 ಪ್ರತಿಶತದಷ್ಟು ಜನರನ್ನ ಕೆಲಸದಿಂದ ತೆಗೆದುಹಾಕಲಾಗಿದೆ. 1,000ಕ್ಕೂ ಹೆಚ್ಚು ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ’ ಎಂದಿದ್ದಾರೆ.

ಕಂಪನಿಯು ಎಲ್ಲಾ ಫ್ರೆಶರ್ಗಳನ್ನ ಕೆಲಸದಿಂದ ವಜಾಗೊಳಿಸಿದೆ ಎಂದು ಹೇಳಿದ್ದು, ‘ಈ ವಜಾದಲ್ಲಿ ಎಲ್ಲಾ ಫ್ರೆಶರ್ಗಳನ್ನ ಬೈಜುಸ್ ವಜಾಗೊಳಿಸಿದೆ’ ಎಂದು ಹೇಳಿದ್ದಾರೆ.

ಈಗಾಗಲೇ ಬೈಜುಸ್ ಕಂಪನಿ ನಷ್ಟದ ಹಾದಿಯಲ್ಲಿದ್ದು, ಸಾವಿರಾರು ಕೋಟಿಯ ಉದ್ಯಮವಾಗಿದ್ದರೂ ಸಾಲದ ಹಾದಿ ಹಿಡಿದಿದೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿಗಳ ವಜಾ ಪ್ರಕ್ರಿಯೆ ನಡೆದಿದೆ ಎನ್ನಲಾಗುತ್ತಿದೆಯಾದರೂ ಬೈಜುಸ್ ಈ ಬಗ್ಗೆ ಯಾವುದೇ ಹೇಳಿಕೆ ಬಿಡುಗಡೆ ಮಾಡಿಲ್ಲ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *