500 ವಿಮಾನ ಖರೀದಿಗೆ ಒಪ್ಪಂದ ಮಾಡಿಕೊಂಡ ಇಂಡಿಗೋ – ವಾಯುಯಾನ ಇತಿಹಾಸದಲ್ಲಿ ಹೊಸ ದಾಖಲೆ

500 ವಿಮಾನ ಖರೀದಿಗೆ ಒಪ್ಪಂದ ಮಾಡಿಕೊಂಡ ಇಂಡಿಗೋ – ವಾಯುಯಾನ ಇತಿಹಾಸದಲ್ಲಿ ಹೊಸ ದಾಖಲೆ

ನ್ಯೂಸ್ ಆ್ಯರೋ‌ : ವಿಶ್ವದ ವಾಯುಯಾನ ಕ್ಷೇತ್ರದಲ್ಲಿ ಭಾರತೀಯರು ಹೊಸದೊಂದು ದಾಖಲೆ ನಿರ್ಮಿಸಿದ್ದಾರೆ. ಭಾರತದ ಅತೀ ದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ ಫ್ರಾನ್ಸ್ ನ ಏರ್ ಬಸ್ ಕಂಪೆನಿ ಜೊತೆಗೆ ಬರೋಬ್ಬರಿ 500 ವಿಮಾನ ಖರೀದಿಗೆ ಒಪ್ಪಂದ ಮಾಡಿಕೊಂಡಿದೆ.

ಇದೇ ಮೊದಲು..!!

ಅಂದಾಜು 55 ಶತಕೋಟಿ ಡಾಲರ್ ಮೊತ್ತದ ಇಂತಹ ಒಪ್ಪಂದ ವಾಯುಯಾನ ಇತಿಹಾಸದಲ್ಲೇ ಮೊದಲು ಎನ್ನುವುದು ವಿಶೇಷ. ಫ್ರಾನ್ಸ್ ನಲ್ಲಿ ನಡೆಯುತ್ತಿರುವ ಏರ್ ಶೋದಲ್ಲಿ ಈ ಒಪ್ಪಂದ ಏರ್ಪಟ್ಟಿದೆ. ಏರ್ ಬಸ್ 500 A320 ವಿಮಾನಗಳನ್ನು ರಿಯಾಯಿತಿ ದರದಲ್ಲಿ ಇಂಡಿಗೋ ಸಂಸ್ಥೆಗೆ ಪೂರೈಸಲಿದೆ.

ಇಂಡಿಗೋ ಸಂಸ್ಥೆಯ ಎಂಡಿ ರಾಹುಲ್ ಭಾಟಿಯಾ ನೇತೃತ್ವದ ತಂಡ ಮತ್ತು ಏರ್ ಬಸ್ ನ ಗುಯಿಲೌಮ್ ಫೌರಿ ಅವರನ್ನೊಳಗೊಂಡ ತಂಡ ಈ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿವೆ. ಇಂಡಿಗೋ 2006ರಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಅಂದಿನಿಂದ ಈವರೆಗೆ ಏರ್ ಬಸ್ ನಿಂದ ಒಟ್ಟು 1,330 ವಿಮಾನಗಳ ಖರೀದಿಗೆ ಒಪ್ಪಂದ ಮಾಡಿಕೊಂಡಂತಾಗಿದೆ.

ಏರ್ ಇಂಡಿಯಾ ದಾಖಲೆ ಮುರಿದ ಇಂಡಿಗೋ

ಫೆಬ್ರವರಿಯಲ್ಲಿ ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ 470 ವಿಮಾನಗಳ ಖರೀದಿಗೆ ಒಪ್ಪಂದ ಮಾಡಿಕೊಂಡಿತ್ತು. ಇದು ಇಲ್ಲಿಯವರೆಗಿನ ಅತಿ ದೊಡ್ಡ ಡೀಲ್ ಎನಿಸಿಕೊಂಡಿತ್ತು. ಇದೀಗ ಇಂಡಿಗೋ ಇದನ್ನು ಮೀರಿಸಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *