ದೊಡ್ಡಬಳ್ಳಾಪುರದಲ್ಲಿ ತಲೆ ಎತ್ತಲಿದೆ ಐ ಫೋನ್‌ ತಯಾರಿಕಾ ಘಟಕ: 5,727 ಕೋಟಿ ಹೂಡಿಕೆ, ಮಾರುಕಟ್ಟೆಗೆ ಬರಲಿದೆ ‘ಮೇಡ್‌ ಇನ್‌ ಕರ್ನಾಟಕ’ ಐ ಫೋನ್‌

ದೊಡ್ಡಬಳ್ಳಾಪುರದಲ್ಲಿ ತಲೆ ಎತ್ತಲಿದೆ ಐ ಫೋನ್‌ ತಯಾರಿಕಾ ಘಟಕ: 5,727 ಕೋಟಿ ಹೂಡಿಕೆ, ಮಾರುಕಟ್ಟೆಗೆ ಬರಲಿದೆ ‘ಮೇಡ್‌ ಇನ್‌ ಕರ್ನಾಟಕ’ ಐ ಫೋನ್‌

ನ್ಯೂಸ್‌ ಆ್ಯರೋ : ಕರ್ನಾಟಕ ರಾಜ್ಯದ ದೊಡ್ಡಬಳ್ಳಾಪುರದ ಕೆಐಎಡಿಬಿ ಪ್ರದೇಶದಲ್ಲಿ ಇನ್ನು ಆ್ಯಪಲ್‌ನ ಐ ಫೋನ್‌ ಉತ್ಪಾದನೆಯಾಗಲಿದೆ. ಅದಕ್ಕಾಗಿ ಜಗತ್ತಿನ ಮುಂಚೂಣಿ ಕಂಪೆನಿಗಳಲ್ಲಿ ಒಂದಾಗಿರುವ ತೈವಾನ್‌ನ ಫಾಕ್ಸ್‌ಕಾನ್‌ ಕಂಪೆನಿ ಮುಂದೆ ಬಂದಿದೆ.

ದೇವನಹಳ್ಳಿಯಲ್ಲಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವೇ ಈ ಘಟಕ ಸ್ಥಾಪಿಸುವ ಸಾಧ್ಯತೆಗಳಿವೆ. ಅದಕ್ಕಾಗಿ 300 ಎಕರೆ ಜಾಗ ಗುರುತಿಸಲಾಗಿದೆ. ಇದರಿಂದಾಗಿ ಒಂದು ಲಕ್ಷಕ್ಕೂ ಹೆಚ್ಚಿನ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಹೊಂದಲಾಗಿದೆ.

ಫಾಕ್ಸ್‌ಕಾನ್‌ ಸಮೂಹದ ಸಿಇಒ ಮತ್ತು ಅಧ್ಯಕ್ಷ ಯಂಗ್‌ ಲಿಯು ನೇತೃತ್ವದ ಉನ್ನತ ಮಟ್ಟದ ನಿಯೋಗ ಈಗಾಗಲೇ ಸ್ಥಳ ವೀಕ್ಷಣೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಐ ಫೋನ್‌ ‘ಮೇಡ್‌ ಇನ್‌ ಕರ್ನಾಟಕ’ ಎಂಬ ಹೆಗ್ಗಳಿಕೆಯನ್ನೂ ಪಡೆದುಕೊಳ್ಳಲಿದೆ. ಅದಕ್ಕಾಗಿ ಕಂಪೆನಿ ₹ 5,727 ಕೋಟಿ ಹೂಡಿಕೆ ಮಾಡಲಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಿಯೋಗವನ್ನು ಬರಮಾಡಿಕೊಂಡ ಐಟಿ, ಬಿಟಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ರಾಜ್ಯದಲ್ಲಿ ಐಟಿ, ತಾಂತ್ರಿಕ ಶಿಕ್ಷಣ, ಕೌಶಲಾಭಿವೃದ್ಧಿ, ನುರಿತ ಮಾನವ ಸಂಪನ್ಮೂಲ, ಉದ್ಯಮಗಳು ನೀಡುತ್ತಿರುವ ಸಹಭಾಗಿತ್ವ ಮತ್ತು ಇಲ್ಲಿರುವ ಅತ್ಯುತ್ತಮ ಕಾರ್ಯ ಪರಿಸರ ಕುರಿತು ಮನದಟ್ಟು ಮಾಡಿಕೊಟ್ಟರು. ಇದೇ ನಿಯೋಗ ಅನಂತರ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ.

ಈ ಕುರಿತ ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ 2025ಕ್ಕೆ ಐದು ಟ್ರಿಲಿಯನ್‌ ಡಾಲರ್‌ ಆರ್ಥಿಕತೆ ಗುರಿ ಹೊಂದಲು ಇದು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

‘ಆ್ಯಪಲ್‌ ಸಂಸ್ಥೆ 300 ಎಕರೆ ಪ್ರದೇಶದಲ್ಲಿ ರಾಜ್ಯದಲ್ಲಿ ತಯಾರಿಕಾ ಘಟಕ ಸ್ಥಾಪನೆ ಮಾಡಲಿದೆ. ಇದು ನರೇಂದ್ರ ಮೋದಿ ಹಾಗೂ ಬೊಮ್ಮಾಯಿ ನೇತೃತ್ವದ ಡಬಲ್‌ ಎಂಜಿನ್‌ ಸರಕಾರದ ಸಾಧನೆ’ ಎಂದು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಪ್ರತಿಕ್ರಿಯಿಸಿದ್ದಾರೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *