ಜೂನ್ ತ್ರೈ ಮಾಸಿಕದಲ್ಲಿ ಭರ್ಜರಿ ಆದಾಯ ಗಳಿಸಿದ ಎಲ್‍ಐಸಿ – ಕಳೆದ ವರ್ಷಕ್ಕಿಂತ 14 ಪಟ್ಟು ಅಧಿಕವಾಯ್ತು ನಿವ್ವಳ ಲಾಭ

ಜೂನ್ ತ್ರೈ ಮಾಸಿಕದಲ್ಲಿ ಭರ್ಜರಿ ಆದಾಯ ಗಳಿಸಿದ ಎಲ್‍ಐಸಿ – ಕಳೆದ ವರ್ಷಕ್ಕಿಂತ 14 ಪಟ್ಟು ಅಧಿಕವಾಯ್ತು ನಿವ್ವಳ ಲಾಭ

ನ್ಯೂಸ್ ಆ್ಯರೋ‌ : ದೇಶದ ಅತಿ ದೊಡ್ಡ ವಿಮಾ ಕಂಪೆನಿ ಭಾರತೀಯ ಜೀವ ವಿಮಾ ನಿಗಮ (ಎಲ್.ಐ.ಸಿ.) ಜೂನ್ ತ್ರೈ ಮಾಸಿಕದಲ್ಲಿ ಬರೋಬ್ಬರಿ 9,544 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ.

14 ಪಟ್ಟು ಏರಿಕೆ

ಕಳೆದ ವರ್ಷದ ಈ ಅವಧಿಗೆ ಹೋಲಿಸಿದರೆ ಲಾಭದ ಪ್ರಮಾಣ 14 ಪಟ್ಟು ಏರಿಕೆಯಾಗಿದೆ. ಕಳೆದ ವರ್ಷ 682 ಕೋಟಿ ನಿವ್ವಳ ಲಾಭ ದಾಖಲಿಸಿತ್ತು. ಎಪ್ರಿಲ್-ಜೂನ್ ಅವಧಿಯಲ್ಲಿ ಎಲ್.ಐ.ಸಿ. ಹೂಡಿಕೆಗಳಿಂದ 90,309 ಕೋಟಿ ರೂ. ಆದಾಯ ಗಳಿಸಿದೆ.

ಅದಾಗ್ಯೂ ಸಂಸ್ಥೆಯ ಮೊದಲ ವರ್ಷದ ಪ್ರೀಮಿಯಂ ಮೊತ್ತ ಶೇ. 8.3ರಷ್ಟು ಕುಸಿತ ಕಂಡು 6,810 ಕೋಟಿ ರೂ.ಗೆ ಇಳಿಕೆಯಾಗಿದೆ. ಕಳೆದ ವರ್ಷ ಈ ಅವಧಿಯಲ್ಲಿ 7,429 ಕೋಟಿ ರೂ. ಪ್ರೀಮಿಯಂ ಮೊತ್ತ ಇತ್ತು.

ಜೂನ್ ತ್ರೈ ಮಾಸಿಕದಲ್ಲಿ ಎಲ್.ಐ.ಸಿ.ಯ ಒಟ್ಟು ಆದಾಯ 1,88,749 ಕೋಟಿ ರೂ.ಗೆ ಏರಿಕೆಯಾಗಿದ್ದು, ಹಿಂದಿನ ವರ್ಷ 1,68,881 ಕೋಟಿ ರೂ. ಇತ್ತು.

Related post

ಅಕ್ರಮ ಭ್ರೂಣ ಹತ್ಯೆ ಹಗರಣ; ವೈದ್ಯರ ವಿರುದ್ಧದ ಪ್ರಕರಣ ರದ್ದು ಸಾಧ್ಯವಿಲ್ಲ…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ವ್ಯಾಪಿಸಿರುವ ಅಕ್ರಮ ಭ್ರೂಣ ಹತ್ಯೆ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. “ಪ್ರಕರಣ…
ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದಾದರೂ ಅದೇ ಸಮಯದಲ್ಲಿ ಭಯ, ದ್ವೇಷ, ಅಸೂಯೆ, ಸೇಡಿನಂಥ ನಕಾರಾತ್ಮಕ ಭಾವನೆಗಳನ್ನು ಹಿಂದೆ ಬಿಡಲು ಸಿದ್ಧವಾಗಿ.…
ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ…

ನ್ಯೂಸ್ ಆ್ಯರೋ : ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…

Leave a Reply

Your email address will not be published. Required fields are marked *