Onion Price Hike : ಕರಾವಳಿಯಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ – ಖರೀದಿಗೂ ಮುನ್ನವೇ ಕಣ್ಣೀರು ತರಿಸಿದ ಈರುಳ್ಳಿ

Onion Price Hike : ಕರಾವಳಿಯಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ – ಖರೀದಿಗೂ ಮುನ್ನವೇ ಕಣ್ಣೀರು ತರಿಸಿದ ಈರುಳ್ಳಿ

ನ್ಯೂಸ್ ಆ್ಯರೋ : ಕೆಂಪು ಸುಂದರಿ ಟೊಮೆಟೊ ದರ ಕ್ರಮೇಣ ಕಡಿಮೆಯಾಗುವ ಲಕ್ಷಣಗಳ ನಡುವೆ ಇದೀಗ ಈರುಳ್ಳಿ ದರ (Onion Price) ದಿಢೀರ್ ಏರಿಕೆಯಾಗಿದೆ. ಮಂಗಳೂರು ನಗರ(Mangalore City) ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (Dakshina Kannada District) ಈರುಳ್ಳಿ ಬೆಲೆ ಗಣನೀಯವಾಗಿ ಹೆಚ್ಚಳವಾಗಿದೆ. ದೇಶದಲ್ಲಿ ಅತಿ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರದಿಂದ ಪೂರೈಕೆ ಕಳೆದ ಎರಡು ವಾರಗಳಿಂದ ಕಡಿಮೆಯಾಗಿದೆ. ಹೀಗಾಗಿ ಈರುಳ್ಳಿ ಬೆಲೆ ಏರುಗತಿಯಲ್ಲಿ ಸಾಗಿದೆ ಎನ್ನಲಾಗುತ್ತಿದೆ.

ಮಹಾರಾಷ್ಟ್ರದ ನಾಸಿಕ್‌ನ ಲಾಸಲ್‌ಗಾಂವ್‌ನ ಎಪಿಎಂಸಿಯ ತರಕಾರಿಯ ಅತಿದೊಡ್ಡ ಸಗಟು ಮಾರುಕಟ್ಟೆಯಲ್ಲಿ ಆಗಸ್ಟ್ 4 ರಂದು ಈರುಳ್ಳಿ ಬೆಲೆ ಕ್ವಿಂಟಾಲ್‌ಗೆ 1550 ರೂ.ಗಳಿಂದ 2300 ರೂ. ವರೆಗೆ ಏರಿಕೆಯಾಗಿತ್ತು. ಇದು ಕಳೆದ ಎಂಟು ತಿಂಗಳಲ್ಲೇ ದಾಖಲಾದ ಗರಿಷ್ಠ ಬೆಲೆಯಾಗಿದೆ.

ಮಂಗಳೂರಿನಲ್ಲಿ ಕಳೆದ ಎರಡು ವಾರಗಳಿಂದ ಈರುಳ್ಳಿ ಬೆಲೆ ನಿರಂತರವಾಗಿ ಏರಿಕೆಯಾಗಿದೆ. ಕಳೆದ ವಾರ ಕ್ವಿಂಟಲ್‌ಗೆ 2000 ರೂ.ಗೆ ತಲುಪಿತ್ತು. ಇದೀಗ 2900 ರೂ. ದಾಟಿದೆ. ಕಳೆದ ವಾರ 26 ರೂ.ಗೆ ಮಾರಾಟವಾಗುತ್ತಿದ್ದ ಒಂದು ಕಿಲೋ ಈರುಳ್ಳಿ ಇದೀಗ 34 ರಿಂದ 35 ರೂ.ಗೆ ಮಾರಾಟವಾಗುತ್ತಿದೆ.

ಸದ್ಯ ನಾಸಿಕ್‌ನ ರೈತರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿರುವ ಕಾರಣ, ಮಾರುಕಟ್ಟೆಯಲ್ಲಿ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ. ಇದು ಬೆಲೆ ಏರಿಕೆಗೆ ಕಾರಣವಾಗಿದೆ. ಈ ಹಿಂದೆ ನಾಸಿಕ್ ಮಾರುಕಟ್ಟೆಯಿಂದ 25 ಸಾವಿರದಿಂದ 30 ಸಾವಿರ ಕ್ವಿಂಟಾಲ್ ಈರುಳ್ಳಿ ಪೂರೈಕೆಯಾಗುತ್ತಿತ್ತು. ಈಗ ಅದು 10,000 ಕ್ವಿಂಟಾಲ್‌ಗೆ ಇಳಿಕೆಯಾಗಿದೆ.

ಹಾಲಿ ಲಭ್ಯವಿರುವ ಪೂರೈಕೆಗೆ ಹೋಲಿಸಿದರೆ ಸ್ಥಳೀಯ ಮಾರುಕಟ್ಟೆಯಲ್ಲಿ ಈರುಳ್ಳಿಗೆ ಬೇಡಿಕೆ ಹೆಚ್ಚಿದೆ. ಮಳೆಯಿಂದಾಗಿ ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ಈರುಳ್ಳಿ ಕೊಯ್ಲು ಒಂದು ತಿಂಗಳು ವಿಳಂಬವಾಗಿದೆ. ಮಹಾರಾಷ್ಟ್ರದ ಅಹಮದ್ ನಗರದಲ್ಲಿಯೂ ಪೂರೈಕೆ ಕಡಿಮೆಯಾಗಿದೆ. ಬಾಂಗ್ಲಾದೇಶದಿಂದ ಈರುಳ್ಳಿಗೆ ಹೆಚ್ಚಿನ ಬೇಡಿಕೆ ಇದೆ, ಇದರ ಪರಿಣಾಮವಾಗಿ ಈರುಳ್ಳಿ ಬೆಲೆ ಏರುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *