ರಸ್ನಾ ತಂಪು ಪಾನೀಯದ ಸ್ಥಾಪಕ ಆರೀಝ್ ನಿಧನ – ಐ ಲವ್ ಯೂ ರಸ್ನಾ ಜಾಹೀರಾತು ಮರೆಯಲುಂಟೇ?

ರಸ್ನಾ ತಂಪು ಪಾನೀಯದ ಸ್ಥಾಪಕ ಆರೀಝ್ ನಿಧನ – ಐ ಲವ್ ಯೂ ರಸ್ನಾ ಜಾಹೀರಾತು ಮರೆಯಲುಂಟೇ?

ನ್ಯೂಸ್ ಆ್ಯರೋ : ವಿಶ್ವದ ಅತಿದೊಡ್ಡ ತಂಪು ಪಾನೀಯವನ್ನು ಜನರಿಗೆ ಪರಿಚಯಿಸಿದ್ದ ರಸ್ನಾ ಗ್ರೂಪ್‌‌ನ ಸ್ಥಾಪಕ ಆರೀಝ್ ಪಿರೋಜ್ಶಾ ಖಂಬಟ್ಟಾ(85) ಅವರು ಇಂದು ವಿಧಿವಶರಾಗಿದ್ದಾರೆ.

ಆರೀಝ್ ಅವರು ಭಾರತೀಯ ಕೈಗಾರಿಕೆ, ವ್ಯಾಪಾರ ಮತ್ತು ಎಲ್ಲಕ್ಕಿಂತ ಮುಖ್ಯವಾಗಿ ಸಾಮಾಜಿಕ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ವಾಪಿಝ್ (ವರ್ಲ್ಡ್ ಅಲೈಯನ್ಸ್ ಆಫ್ ಪಾರ್ಸಿ ಇರಾನಿ ಜರ್ತೋಸ್ಟಿಸ್) ನ ಮಾಜಿ ಅಧ್ಯಕ್ಷರಾಗಿ ಮತ್ತು ಅಹಮದಾಬಾದ್ ಪಾರ್ಸಿ ಪಂಚಾಯತ್ ನ ಹಿಂದಿನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ತಂಪು ಪಾನೀಯಗಳಲ್ಲಿ ಆರೀಝ್ ಅವರ ಬ್ರಾಂಡ್ ರಸ್ನಾ ತುಂಬಾನೇ ಹೆಸರುವಾಸಿಯಾಗಿದ್ದು, ಇದು ದೇಶದ 1.8 ಮಿಲಿಯನ್ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಮಾರಾಟವಾಗುತ್ತದೆ. 1970ರಲ್ಲಿ ಕೈಗೆಟಕುವ ದರದಲ್ಲಿ ಅಝೀಝ್ ಅವರು ರಸ್ನಾ ತಂಪು ಪಾನೀಯವನ್ನು ಮಾರುಕಟ್ಟೆಗೆ ಪರಿಚಯಿಸಿದ್ದರು.

5 ರೂ. ಮೊತ್ತದ ಒಂದು ಪ್ಯಾಕೇಟ್ ರಸ್ನಾದಿಂದ ಸುಮಾರು 32 ಗ್ಲಾಸ್ ತಂಪು ಪಾನೀಯ ತಯಾರಿಸಬಹುದಾಗಿತ್ತು. ಈ ಬೆಳವಣಿಗೆಯ ನಂತರ ‘ಐ ಲವ್ ಯೂ ರಸ್ನಾ’ ಎಂಬ ಧ್ಯೇಯದೊಂದಿಗೆ 80ರ ದಶಕದಲ್ಲಿ ಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದ ಅಭಿಯಾನ ಆರಂಭಿಸಿದ್ದ ರಸ್ನಾ ಇಂದಿಗೂ ಮಾರುಕಟ್ಟೆಯಲ್ಲಿ ಜನಪ್ರಿಯತೆ ಉಳಿಸಿಕೊಂಡಿದೆ.

ಮಕ್ಕಳಿಗೆ ತುಂಬಾ ಪ್ರಿಯವಾಗುವ ರಸ್ನಾ ತಂಪು ಪಾನೀಯ ಹಣ್ಣುಗಳ ರುಚಿಯೊಂದಿಗೆ ನ್ಯೂಟ್ರೀಷಿಯನನ್ನು ಪೂರೈಸುತ್ತದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *