
ನಾಳೆಯಿಂದ ಎಲ್‌ಪಿಜಿ ಸಿಲಿಂಡರ್ ದರದಲ್ಲಿ 200 ರೂಪಾಯಿ ಕಡಿತ – ಜನಸಾಮಾನ್ಯರಿಗೆ ಕೇಂದ್ರದಿಂದ ಗುಡ್‌ನ್ಯೂಸ್..!
- ವಾಣಿಜ್ಯ ಸುದ್ದಿ
- August 29, 2023
- No Comment
- 45
ನ್ಯೂಸ್ ಆ್ಯರೋ : 14ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ₹200ಯನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ನಾಳೆಯೊಳಗೆ ಕೇಂದ್ರ ಸರ್ಕಾರ ಆದೇಶವನ್ನು ಪ್ರಕಟಿಸಲಿದೆ ಎಂದು ಇಂಗ್ಲಿಷ್ ಮಾಧ್ಯಮವೊಂದು ವರದಿ ಮಾಡಿದೆ.
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದ ಹಾಗೇ ಕೇಂದ್ರದಿಂದ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ವರ್ಷಾಂತ್ಯದಲ್ಲಿ ನಡೆಯಲಿರುವ ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ, ತೆಲಂಗಾಣ ಮತ್ತು ಮಿಜೋರಾಂ – ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುನ್ನಾ ಜಾರಿಯಾಗಲಿದೆ.
ಈಗಾಗಲೇ ಕೇಂದ್ರ ಬಿಜೆಪಿ ಸರ್ಕಾರ ಅವಧಿಯಲ್ಲಿ ಬೆಲೆ ಏರಿಕೆ ವಿರುದ್ಧ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಿನದಿಂದ ದಿನಕ್ಕೆ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯಲ್ಲಿ ಏರಿಕೆ ಕಂಡು ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರ ಬೆನ್ನಲ್ಲೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಮೇಲಿನ ದರದಲ್ಲೂ ಏರಿಕೆ ಮಾಡುತ್ತಾ ಬಂದಿತ್ತು. ಇದೀಗ ಮುಂಬರುವ ಲೋಕಸಭೆ ಮುನ್ನಾ ಕೇಂದ್ರ ಸರ್ಕಾರದಿಂದ ಎಲ್‌ಪಿಜಿ ಸಿಲಿಂಡರ್ ದರದಲ್ಲಿ 200 ರೂಪಾಯಿ ಕಡಿತ ಮಾಡುವ ಮೂಲಕ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಿದೆ ಎನ್ನಲಾಗಿದೆ.
ಪ್ರಸ್ತುತ, ದೇಶೀಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ದೆಹಲಿಯಲ್ಲಿ ರೂ 1053, ಮುಂಬೈನಲ್ಲಿ ರೂ 1052.50, ಚೆನ್ನೈನಲ್ಲಿ ರೂ 1068.50 ಮತ್ತು ಕೋಲ್ಕತ್ತಾದಲ್ಲಿ ರೂ 1079 ಆಗಿದೆ. ತೈಲ ಮಾರುಕಟ್ಟೆ ಕಂಪನಿಗಳು ಜುಲೈನಲ್ಲಿ ದೇಶೀಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 50 ರೂ. ಈ ಹಿಂದೆ ಮೇ ತಿಂಗಳಲ್ಲಿ ಎರಡು ಬಾರಿ ಬೆಲೆ ಏರಿಕೆ ಮಾಡಲಾಗಿತ್ತು.