ಎಂಎಲ್ಸಿ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ: ಎಲ್ಲಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ?

p yogeshwar
Spread the love

ನ್ಯೂಸ್ ಆ್ಯರೋ: ಚನ್ನಪಟ್ಟಣ ಉಪಚುನಾವಣೆಯ ರಣರಂಗಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಬಿಜೆಪಿಯ ಟಿಕೆಟ್‌ಗೆ ಪಟ್ಟು ಹಿಡಿದಿದ್ದ MLC ಸಿ.ಪಿ ಯೋಗೇಶ್ವರ್ ಅವರು ಬಂಡಾಯದ ಮುನ್ಸೂಚನೆ ನೀಡಿದ್ದಾರೆ. ಬಿಜೆಪಿ ಟಿಕೆಟ್ ಮಿಸ್ ಆದ್ರೆ ಬೇರೆ ಪಕ್ಷದಿಂದ ಸ್ಪರ್ಧಿಸುವ ಲೆಕ್ಕಾಚಾರ ರಾಜ್ಯ ರಾಜಕೀಯದ ತೀವ್ರ ಸಂಚಲನ ಸೃಷ್ಟಿಸಿದೆ.

ಚನ್ನಪಟ್ಟಣ ಚುನಾವಣಾ ಅಖಾಡದಲ್ಲಿ ಸಿ.ಪಿ ಯೋಗೇಶ್ವರ್ ನಡೆ ತೀವ್ರ ಕುತೂಹಲ ಕೆರಳಿಸಿದೆ. ಬಿಜೆಪಿ ಹೈಕಮಾಂಡ್‌ನಿಂದ ಟಿಕೆಟ್‌ ಪಡೆಯಲು ಯೋಗೇಶ್ವರ್ ಅವರು ಭಾರೀ ಕಸರತ್ತು ಮಾಡಿದ್ದರು. ಆದರೆ ಟಿಕೆಟ್ ಸಿಗುವ ಸಾಧ್ಯತೆ ಕ್ಷೀಣಿಸುವುದರಿಂದ ಮಹತ್ವದ ನಿರ್ಧಾರ ಪ್ರಕಟ ಮಾಡುವ ಸಾಧ್ಯತೆ ಇದೆ.

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಸಿ.ಪಿ ಯೋಗೇಶ್ವರ್‌ ಅವರಿಗೆ ಆಫರ್ ಒಂದನ್ನ ನೀಡಿದ್ದರು. ಆದರೆ ಯಾವುದಕ್ಕೂ ಮಣಿಯದ ಸೈನಿಕ ಖ್ಯಾತಿಯ ಯೋಗೇಶ್ವರ್ ಅವರು ಇಂದು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಮಾಹಿತಿ ಪ್ರಕಾರ ಬಿಜೆಪಿ ಎಂಎಲ್‌ಸಿ ಸಿ.ಪಿ ಯೋಗೇಶ್ವರ್ ಅವರು ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೊರಟಿದ್ದಾರೆ.

ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದಾರೆ. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಕರೆ ಮಾಡಿ ರಾಜೀನಾಮೆ ಸಂಬಂಧ ಮಾತುಕತೆ ನಡೆಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆಯಲು ಸಿ.ಪಿ ಯೋಗೇಶ್ವರ್ ಕೊನೆ ಹಂತದಲ್ಲಿ ರಾಜೀನಾಮೆ ಅಸ್ತ್ರ ಬಳಸಿದ್ದಾರೆ. ಒಂದು ವೇಳೆ ಬಿಜೆಪಿ ಟಿಕೆಟ್​ ಮಿಸ್​ ಆದ್ರೆ ಬೇರೆ ಪಕ್ಷದಿಂದ ಸ್ಪರ್ಧಿಸ್ತಾರಾ ? ಅಥವಾ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸ್ತಾರಾ ಅನ್ನೋ ಚರ್ಚೆ ಶುರುವಾಗಿದೆ.

Leave a Comment

Leave a Reply

Your email address will not be published. Required fields are marked *

error: Content is protected !!