ನ್ಯೂಸ್ ಆ್ಯರೋ : ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಉಳ್ಳಾಲ ಧರ್ಮನಗರದ ಶ್ರೀಧರ್ ಎಂಬವರ ಮನೆಯ ಮಲಗುವ ಕೋಣೆಯ ಕಪಾಟಿನಲ್ಲಿರಿಸಿದ್ದ ಸುಮಾರು 32 ಪವನ್ ಗಿಂತಲೂ ಹೆಚ್ಚಿದ್ದ ಸುಮಾರು 15 ಲಕ್ಷ ಬೆಲೆಬಾಳುವ ಚಿನ್ನಾಭರಣಗಳನ್ನು ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು ಇಬ್ಬರು ಅಪ್ರಾಪ್ತರ ಸಹಿತ ಒಟ್ಟು ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದ ವಿವರ :ದಿನಾಂಕ:08-06-2024 ರ ಬೆಳಿಗ್ಗೆ ಸುಮಾರು 08:00 ಗಂಟೆಯಿಂದ
ಉಡುಪಿ : ಪೆರ್ಡೂರು ಗ್ರಾಮ ಪಂಚಾಯತ್ ನಲ್ಲಿ ಪಿಡಿಓ ರಾಜಕೀಯ – ಎರಡೆರಡು ಪಂಚಾಯತ್ ನ ಜವಾಬ್ದಾರಿ ಇದೆ, ಆದರೆ ಎರಡೂ ಕಡೆ ಕೆಲಸ ಮಾಡಲ್ಲವಂತೆ..!!
ನ್ಯೂಸ್ ಆ್ಯರೋ : ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸುಮನ ಕೆ. ಅವರನ್ನು ವರ್ಗಾವಣೆ ಮಾಡಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರೇ ಒತ್ತಾಯ ಮಾಡಿದ್ದಾರೆ. ಒಂದು ವೇಳೆ ವರ್ಗಾವಣೆ ಮಾಡದಿದ್ದರೆ ಗ್ರಾಮ ಪಂಚಾಯತ್ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಏನಿದು ವಿವಾದ ? ಪೆರ್ಡೂರು ಗ್ರಾಮ ಪಂಚಾಯತ್ ಪಿಡಿಓ ಸುಮನ ಅವರಿಗೆ ಹೆಚ್ಚುವರಿಯಾಗಿ ಬೈರಂಪಳ್ಳಿ ಪಂಚಾಯ
ಉಡುಪಿ : ಕಡಲ ಕೊರೆತದ ನಡುವೆ ಮರವಂತೆ ಬೀಚ್ ನಲ್ಲಿ ಪ್ರವಾಸಿಗರ ಹುಚ್ಚಾಟ – ಸಮುದ್ರಕ್ಕೆ ಇಳಿದು ಅನಾಹುತಕ್ಕೆ ಆಹ್ವಾನ : ಜಿಲ್ಲಾಡಳಿತ ಇತ್ತ ಗಮನ ಹರಿಸಿ…!
ನ್ಯೂಸ್ ಆ್ಯರೋ : ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳ ಹಿಂದೆ ನಿರಂತರವಾಗಿ ಸುರಿದ ಮಳೆ ಹಿನ್ನೆಲೆ ಸಾಕಷ್ಟು ಭಾಗದಲ್ಲಿ ಕಡಲ ಕೊರೆತ ಸಮಸ್ಯೆ ಉಂಟಾಗಿದೆ. ಆದರೆ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ವಿಶ್ವ ಪ್ರಸಿದ್ಧ ತ್ರಾಸಿ ಮರವಂತೆ ಬೀಚ್ನಲ್ಲಿ (Maravanthe Beach) ಪ್ರವಾಸಿಗರ ಹುಚ್ಚಾಟ ಹೆಚ್ಚಾಗಿದೆ. ಪ್ರತಿ ದಿನ ಪ್ರವಾಸಿಗರು ಮರವಂತೆ ಬೀಚ್ಗೆ ಆಗಮಿಸುವ ಪ್ರವಾಸಿಗರು ಸಮುದ್ರದ ಅಲೆಗಳ ನರ್ತನವನ್ನು ಎಂಜಾಯ್ ಮಾ
ನಿಲ್ಲದ ವರುಣನ ಅಬ್ಬರ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ – ನಾಳೆ ಜುಲೈ 6ರಂದು ಪಿಯುಸಿವರೆಗಿನ ಮಕ್ಕಳಿಗೆ ರಜೆ ಘೋಷಣೆ
ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ 06-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ
ಉಡುಪಿ ಜಿಲ್ಲಾದ್ಯಂತ ಪಿಯುವರೆಗಿನ ಮಕ್ಕಳಿಗೆ ರಜೆ ಘೋಷಣೆ – ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಅಧಿಕೃತ ಆದೇಶ
ನ್ಯೂಸ್ ಆ್ಯರೋ : ಭಾರೀ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ಜುಲೈ 6ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ವಿದ್ಯಾ ಕುಮಾರಿಯವರು ಆದೇಶ ನೀಡಿದ್ದಾರೆ. ಈ ಮೊದಲು ಜಿಲ್ಲೆಯ ಎರಡು ತಾಲೂಕುಗಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು. ಜಿಲ್ಲಾಧಿಕಾರಿಗಳು ಮೌಖಿಕವಾಗಿ ತಿಳಿಸಿದ್ದು, ಆದೇಶದ ಪ್ರತಿಯನ್ನು ಇನ್ನು ಕೆಲವೇ ನಿಮಿಷಗಳಲ್ಲಿ ಹಾಕಲಾಗುವುದು