ನ್ಯೂಸ್ ಆ್ಯರೋ: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಸಂಸತ್ತಿನಲ್ಲಿ ಸದನದ ಗಮನಸೆಳೆದಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರಡಿ ಈ ವಿಷಯ ಉಲ್ಲೇಖಿಸಿದ ಕ್ಯಾ. ಚೌಟ ಅವರು, 905 ಹಾಸಿಗೆಗಳ ವೆನ್ಲಾಕ್ ಆಸ್ಪತ್ರೆಯಲ್ಲಿ ದಾದಿಯರ ಕೊ
ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಹಿನ್ನಡೆ; ಸಹಿ ಹಾಕದೇ ವಾಪಸ್ ಕಳುಹಿಸಿದ ರಾಜ್ಯಪಾಲರು
ನ್ಯೂಸ್ ಆ್ಯರೋ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಅಂಕುಶ ಹಾಕಲು ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಿ ರಾಜ್ಯಪಾಲರಿಗೆ ಕಳುಹಿಸಿತ್ತು. ಇದೀಗ ಈ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಹಿನ್ನಡೆ ಆಗಿದೆ. ಸರ್ಕಾರ ಕಳುಹಿಸಿರುವ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಮಾಡದೇ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಸುಗ್ರಿವಾಜ್ಞೆಯಲ್ಲಿ ಕೆಲವು ದೋಷಗಳು ರಾಜ್ಯಪಾಲರ ಗಮನಕ್ಕೆ ಬಂದಿರುವ ಹಿನ್ನ
ಮುಡಾ ನಿವೇಶನ ಹಂಚಿಕೆ ಪ್ರಕರಣ;ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್
ನ್ಯೂಸ್ ಆ್ಯರೋ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿ
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಕೇಸ್; ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್
ನ್ಯೂಸ್ ಆ್ಯರೋ: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ಹೈಕೋರ್ಟ್ ಪೀಠ ಇಂದು (ಫೆಬ್ರವರಿ 07) ಆದೇಶ ಹೊರಡಿಸಿದೆ. ಇದರಿಂದ ಯಡಿಯೂರಪ್ಪ ಬಂಧನದ ಭೀತಿಯಿಂದ ಪಾರಾಗಿದ್ದಾರೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯ
16ನೇ ಬಜೆಟ್ ಗೆ ಕೌಂಟ್ ಡೌನ್ ಶುರು: ರಾಜ್ಯದ ಇತಿಹಾಸದಲ್ಲೇ ಮೊದಲ ಬಿಗ್ ಬಜೆಟ್
ನ್ಯೂಸ್ ಆ್ಯರೋ: 2025-26 ನೇ ಸಾಲಿನ ಬಜೆಟ್ ಅನ್ನು ಹಣಕಾಸು ಇಲಾಖೆಯ ಜವಾಬ್ದಾರಿಯನ್ನೂ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 14 ರಂದು ಮಂಡಿಸಲಿದ್ದಾರೆ ಎನ್ನಲಾಗ್ತಿದ್ದು, ಇದು ಸಿದ್ದರಾಮಯ್ಯ ಅವರ 16ನೇ ದಾಖಲೆಯ ಬಜೆಟ್ ಮಂಡನೆಯಾಗಿರಲಿದೆ. ರಾಜ್ಯದಲ್ಲಿ ಜುಲೈ 2023ರಲ್ಲಿ 14ನೇ ಬಜೆಟ್ ಮಂಡಿಸಿದಾಗಲೇ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಸಿದ್ದರಾಮಯ್ಯ ಅವರ ಹೆಸರಿನಲ್ಲಿದೆ. 2024-25ನೇ ಸಾಲಿನ ಬಜೆಟ್ ಅನ