ಶಾರದೇಯ ನವರಾತ್ರಿ ಅಕ್ಟೋಬರ್ 3 ರಿಂದ ಪ್ರಾರಂಭವಾಗುತ್ತದೆ. ಈ ಒಂಬತ್ತು ದಿನಗಳಲ್ಲಿ ಮಾತೃದೇವತೆಯ ಒಂಬತ್ತು ರೂಪಗಳನ್ನು ಪೂಜಿಸಲಾಗುತ್ತದೆ. ನವರಾತ್ರಿಯ ಮೊದಲ ದಿನವನ್ನು ತಾಯಿ ಶೈಲಪುತ್ರಿಗೆ ಸಮರ್ಪಿಸಲಾಗುತ್ತದೆ. ಶೈಲಪುತ್ರಿ ದೇವಿಯ ಆರಾಧನೆಯು ನವರಾತ್ರಿಯ ಮೊದಲ ದಿನದಂದು ಮಾತ್ರವಲ್ಲ, ಜೀವನದ ಪ್ರತಿಯೊಂದು ಸಂದರ್ಭದಲ್ಲೂ ಮುಖ್ಯವಾಗಿ ಮಾಡಬೇಕು. ಈಕೆಯ ಆರಾಧನೆಯು ನಮಗೆ ತಾಳ್ಮೆ, ಧೈರ್ಯ ಮತ್ತು ಶಾಂತಿಯ ಮಾರ್ಗವನ್ನು ತೋರಿಸುತ್ತಾಳೆ
ಗಣೇಶನ ಮೂರ್ತಿಗೆ ಕಲ್ಲು ತೂರಿದ ಕಿಡಿಗೇಡಿಗಳು
ವಿಜಯಪುರ : ವಿಜಯಪುರದಲ್ಲಿ ಗಣೇಶ ಮೂರ್ತಿಗೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ವಿಜಯನಗರದ ಗಣಪತಿ ಚೌಕ್ ನಲ್ಲಿರುವ ಗಣೇಶ ಮೂರ್ತಿಗೆ ಕಿಡಿಗೇಡಿಗಳು ಕಲ್ಲು ತೂರಿದ್ದು, ಸ್ಥಳದಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಘಟನೆ ಹಿನ್ನೆಲೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿಡಿಗೇಡಿಗಳ ಕ
ವಿಶ್ವ ವಿಖ್ಯಾತ ನಾಡಹಬ್ಬ 414ನೇ ದಸರಾ ಉತ್ಸವಕ್ಕೆ ಇಂದು ಚಾಲನೆ
ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಉತ್ಸವಕ್ಕೆ ಮೈಸೂರು ಸಜ್ಜಾಗಿದ್ದು ಎಲ್ಲೆಡೆ ನವರಾತ್ರಿಯ ಸಂಭ್ರಮ, ಸಡಗರ ಕಳೆಕಟ್ಟಿದೆ. ಚಾಮುಂಡಿಬೆಟ್ಟದಲ್ಲಿ ಗುರುವಾರ 414ನೇ ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ದೊರೆಯಲಿದೆ. ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಬೆಳಗ್ಗೆ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆಯೊಂದಿಗೆ ಹಿರಿಯ ಸಾಹಿತಿ ನಾಡೋಜ ಡಾ| ಹಂಪ ನಾಗರಾಜಯ್ಯ ಅವರು ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ. ಈ ಮೂಲಕ 10 ದಿನ ನಡೆಯುವ ದಸರ
ಮೈಸೂರು ದಸರಾದಲ್ಲೂ ಧರ್ಮ ದಂಗಲ್ !
ಮೈಸೂರು: ವಿಶ್ವವಿಖ್ಯಾತ ದಸರಾ ಬಂದರೆ ಸಾಕು ಮೈಸೂರಿನಲ್ಲಿ ಒಂದಿಲ್ಲೊಂದು ವಿಚಾರಗಳು ಹುಟ್ಟಿಕೊಳ್ಳುತ್ತವೆ. ಇತ್ತೀಚೆಗಷ್ಟೇ ಮಹಿಷಾ ದಸರಾ ಸಂಘರ್ಷವಾಗಿತ್ತು. ಅದು ಮುಗಿಯಿತು ಎನ್ನುವಷ್ಟರಲ್ಲಿ ಇದೀಗ ಧರ್ಮ ದಂಗಲ್ ಶುರುವಾಗಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಗುಂಬಜ್ ಮಾದರಿ ದೀಪಾಲಂಕಾರದ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಅಪಸ್ವರ ಎತ್ತಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರತಾಪ್ ಸಿಂಹ, ಮೈಸೂರಿನ ಸಯ್ಯಾಜಿರಾವ್ ರ
ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್
ಶಿವಮೊಗ್ಗ: ವಾರದ ಏಳು ದಿನಗಳ ಕಾಲ ಮಧ್ಯಾನದ ಬಿಸಿ ಊಟದೊಂದಿಗೆ ಪೌಷ್ಟಿಕ ಆಹಾರ ಮೊಟ್ಟೆ ವಿತರಣೆ ಮಾಡಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಹೇಳಿದರು. ಇಂದು ಅಜೀಮ್ ಪ್ರೇಮ್ ಜಿ ಫೌಂಡೇಶನ್ ಸಹಯೋಗದೊಂದಿಗೆ ಸಾಗರದ ಗಾಂಧಿ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಈ ಹಿಂದೆ ವಾರದಲ್ಲಿ ಒಂದು ದಿನ ನೀಡಲಾಗುತ್