ವಿಧಾನಸಭಾ ಉಪ ಚುನಾವಣೆ; ʼಸೈನಿಕʼನ ಚಕ್ರವ್ಯೂಹ ಬೇಧಿಸಲು ಹೊರಟ ʼಅಭಿಮನ್ಯುʼ

NIKHIL
Spread the love

ನ್ಯೂಸ್ ಆ್ಯರೋ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿರುವ ಚನ್ನಪಟ್ಟಣ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಅಂತಿಮವಾಗಿದ್ದು, ಕಾರ್ಯಕರ್ತರ ಒತ್ತಡಕ್ಕೆ ಮಣಿದು ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಗುರುವಾರ ಘೋಷಿಸಿದ್ದಾರೆ.

Nikil

ಇದರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸಿ.ಪಿ ಯೋಗೇಶ್ವರ್ ಅವರಿಗೆ ಎದುರಾಳಿ ಯಾರು ಅನ್ನೋ ಗೊಂದಲಕ್ಕೆ ತೆರೆ ಬಿದ್ದಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರೇ ಕಣಕ್ಕಿಳಿಯುವುದು ಫಿಕ್ಸ್ ಆಗಿದೆ. ಜೆಡಿಎಸ್ ವರಿಷ್ಠರು ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಿಖಿಲ್ ಅವರನ್ನ ಮತ್ತೊಂದು ಅಗ್ನಿಪರೀಕ್ಷೆಯ ಕಣಕ್ಕಿಳಿಸಲು ರೆಡಿಯಾಗಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಪ್ರಧಾನಿ ಮೋದಿ ಬೆಂಬಲವಿದ್ದು, ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಜೆಡಿಎಸ್-ಬಿಜೆಪಿ ನಾಯಕರ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಎನ್ ಡಿ ಎ ಅಭ್ಯರ್ಥಿಯನ್ನಾಗಿ ನಿಖಿಲ್ ಕುಮಾರಸ್ವಾಮಿ ಆಯ್ಕೆ ಮಾಡಲಾಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಬೆಂಬಲ ಹಾಗೂ ಆಶೀರ್ವಾದವೂ ಇದೆ. ಇಲ್ಲಿ ಸ್ಪರ್ಧೆ ಅಷ್ಟೇ ಅಲ್ಲ, ನೂರಕ್ಕೂ ನೂರು ಗೆಲ್ಲುತ್ತೇವೆ. ನಮಗೆ ಸಂಪೂರ್ಣ ವಿಶ್ವಾಸ ಇದೆ. ಜೆಡಿಎಸ್ ಬಿಜೆಪಿ ನಾಯಕರು ಪ್ತವಾಸ ಮಾಡ್ತೇವೆ. ಪಕ್ಷಾಂತರ ಮಾಡಿದವರ ಬಗ್ಗೆ ಮಾತಾಡಲ್ಲ. ಅನಾವಶ್ಯಕ ವಿಚಾರ ಚರ್ಚೆ ಮಾಡಲ್ಲ. ಎಲ್ಲ ಆಯಾಮಗಳಲ್ಲಿಯೂ ಚರ್ಚೆ ಮಾಡಿ ತಿರ್ಮಾನ ಮಾಡಿದ್ದೇವೆ ಎಂದು ಹೇಳಿದರು.

Leave a Comment

Leave a Reply

Your email address will not be published. Required fields are marked *

error: Content is protected !!