Darshan Case : ರೇಣುಕಾಸ್ವಾಮಿ ತನಗೂ ಅಶ್ಲೀಲ ಮೆಸೇಜ್ ಕಳಿಸಿದ್ದ..!! – ಬಿಗ್ ಬಾಸ್ ಮಹಿಳಾ ಸ್ಪರ್ಧಿಯಿಂದ ಆರೋಪ..!!

20240623 183258
Spread the love

ನ್ಯೂಸ್ ಆ್ಯರೋ : ಚಿತ್ರದುರ್ಗದ ರೇಣುಕಾ ಸ್ವಾಮಿ ನಟ ದರ್ಶನ್ ಗೆಳತಿ ಪವಿತ್ರಾ ಗೌಡಳಿಗೆ ಮಾಡಿದ ಅಶ್ಲೀಲ ಮೆಸೇಜ್ ನಿಂದಾಗಿ ಕೊಲೆಯಾಗಿದ್ದು, ಈ ಪ್ರಕರಣದಲ್ಲಿ ದರ್ಶನ್ ಜೈಲು ಪಾಲಾಗಿದ್ದಾರೆ. ಇದೀಗ ಈ ಪ್ರಕರಣದಲ್ಲಿ ಕೊಲೆಯಾದ ರೇಣುಕಾಸ್ವಾಮಿ ವಿರುದ್ಧ ಬಿಗ್ ಬಾಸ್ ನ ಮಾಜಿ ಮಹಿಳಾ ಸ್ಪರ್ಧಿಯೊಬ್ಬರು ತನಗೂ ಆತ ಅಶ್ಲೀಲ ಮೆಸೇಜ್ ಕಳಿಸಿದ್ದ ಎಂದು ಆರೋಪಿಸಿದ್ದಾರೆ.

ಇದೀಗ ಬಿಗ್‌ಬಾಸ್ ಖ್ಯಾತಿಯ ಚಿತ್ರಾಲ್ ರಂಗಸ್ವಾಮಿ (Chitral Rangaswamy) ಕೂಡ ತಮಗೂ ಈ ಅಕೌಂಟ್‌ನಿಂದ ಕೆಟ್ಟ ಮೆಸೇಜ್ ಬಂದಿತ್ತು ಎಂದು ಆರೋಪಿಸಿದ್ದು, ಈ ಬಗ್ಗೆ ವಿಡಿಯೊ ಶೇರ್‌ ಮಾಡಿ, ಅಕೌಂಟ್‌ ಫೋಟೊವನ್ನು ಇನ್‌ಸ್ಟಾದಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

‌ʻʻಎಲ್ಲರಿಗೂ ನಮಸ್ಕಾರ, ಪ್ರಸ್ತುತ ಏನು ನಡೆಯುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ. ಈ ಕೊಲೆ ವಿಚಾರವಾಗಿ ಎಲ್ಲರಿಗೂ ಡಿಸ್ಟರ್ಬ್‌ ಕೂಡ ಆಗಿದೆ. ಇಲ್ಲಿ ಯಾರಿಗೂ ನಾನು ಸಪೋರ್ಟ್‌ ಮಾಡಲು ಬಂದಿಲ್ಲ. ದೇವರು ರೇಣುಕಾ ಸ್ವಾಮಿ ಕುಟುಂಬಕ್ಕೆ ಶಕ್ತಿ ಕೊಡಲಿ. ಆದರೆ ರೇಣುಕಾ ಸ್ವಾಮಿ ಅವರು ಈ ತರ ಹಲವರಿಗೆ ಮೆಸೆಜ್ ಕಳುಹಿಸಿದ್ದರು. ಈ ಬಗ್ಗೆ ಮಾರ್ಚ್‌ನಲ್ಲಿ ಪೊಲೀಸ್‌ ಸ್ಟೇಷನ್‌ನಲ್ಲಿ ಕಂಪ್ಲೇಟ್‌ ಕೂಡ ಆಗಿದೆ. ಅವರ ಅಕೌಂಟ್‌ ಈ ರೀತಿ ಗೌತಮ್‌ ಅನ್ನುವ ಹೆಸರಲ್ಲಿ ಇತ್ತು.

ಈ ಅಕೌಂಟ್ ಇಂದ ಅದೇ ರೀತಿಯ ಕೆಟ್ಟ ಮೆಸೇಜ್‌ಗಳನ್ನು ಇನ್ನು ಸಾಕಷ್ಟು ಜನರಿಗೆ ಕಳುಹಿಸಿದ್ದರಂತೆ. ನನಗೆ ಅಚ್ಚರಿ ಆಯಿತು. ನಾನು ಅದರ ಸ್ಕ್ರೀನ್‌ ಶಾಟ್ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡರೆ ತಪ್ಪಾಗುತ್ತದೆ. ಹಾಗಾಗಿ ಹಾಕಲಿಲ್ಲ. ನನಗೆ ಆ ರೀತಿ ಮರ್ಮಾಂಗದ ಚಿತ್ರ ಆಗಲಿ, ಬೆತ್ತಲೆ ಫೋಟೊ ಆಗಲಿ ಅಥವಾ ಹಸ್ತ ಮೈಥುನ ವೀಡಿಯೋ ಆಗಲಿ ಬಂದರೆ ನಾನು ಕೂಡಲೇ ಆ ಅಕೌಂಟ್ ಬ್ಲಾಕ್ ಮಾಡ್ತೀನಿ. ನನ್ನ ಇನ್‌ಸ್ಟಾಗ್ರಾಮ್ ಬ್ಲಾಕ್ ಲಿಸ್ಟ್ ಅಲ್ಲಿ ನೋಡಿದಾಗ ಈ ಅಕೌಂಟ್ ಇದೆ. ಇಷ್ಟು ದಿನ ನಾನು ಸುಮ್ಮನಿದ್ದೆ.

ಆದರೆ ಇದನ್ನು ನೋಡಿದ ಮೇಲೆ ಹೇಳಬೇಕು ಎಂದು ಮುಂದೆ ಬಂದೆ. ಭಯ ಅನ್ನಿಸಿತು. ಬೇಸರ ಆಗುತ್ತದೆ. ಅಂತಹ ಸುಂದರ ಹೆಂಡತಿ ಇರುವಾಗ ಈ ರೀತಿ ಸರೀನಾ? ಛೀ ಎನಿಸುತ್ತದೆ. ನನಗೆ ಪ್ರತಿದಿನ ಇಂತಹ ಸಾಕಷ್ಟು ಕೆಟ್ಟ ಮೆಸೇಜ್, ಟ್ರೋಲ್ ಎದುರಾಗುತ್ತಿರುತ್ತದೆ’ ಎಂದು ಚಿತ್ರಾಲ್ ವಿವರಿಸಿದ್ದಾರೆ.

Leave a Comment

Leave a Reply

Your email address will not be published. Required fields are marked *

error: Content is protected !!