ʼಜಮೈಕಾ ಟು ಇಂಡಿಯಾʼ: ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್

Chris Gayle meets PM Modi
Spread the love

ನ್ಯೂಸ್ ಆ್ಯರೋ: ವೆಸ್ಟ್ ಇಂಡೀಸ್ ಕ್ರಿಕೆಟ್ ದಿಗ್ಗಜ ಕ್ರಿಸ್ ಗೇಲ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಜಮೈಕಾ ಪ್ರಧಾನಿ ಆಂಡ್ರ್ಯೂ ಹೋಲ್ನೆಸ್ ಭಾರತಕ್ಕೆ ಭೇಟಿ ನೀಡಿದ್ದು, ಅವರೊಂದಿಗೆ ಗೇಲ್ ಕೂಡ ಆಗಮಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿರುವ ಕ್ರಿಸ್ ಗೇಲ್, ಅವರೊಂದಿಗಿನ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿರುವುದು ಗೌರವ. ಜಮೈಕಾ ಟು ಇಂಡಿಯಾ” ಎಂಬ ಶೀರ್ಷಿಕೆಯೊಂದಿಗೆ “OneLove” ಹ್ಯಾಶ್‌ಟ್ಯಾಗ್‌ನೊಂದಿಗೆ ಗೇಲ್ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ಕ್ರೀಸ್​ ಗೇಲ್ ಕೂಡ ಜಮೈಕಾದವರಾಗಿದ್ದು, ಹೀಗಾಗಿ ಪ್ರಧಾನಿ ಆಂಡ್ರ್ಯೂ ಹೋಲ್ನೆಸ್ ಅವರೊಂದಿಗೆ ನಾಲ್ಕು ದಿನಗಳ ಭೇಟಿಗಾಗಿ ನವದೆಹಲಿಗೆ ಆಗಮಿಸಿದ್ದಾರೆ. ವಿಶೇಷ ಎಂದರೆ ಇದೇ ಮೊದಲ ಬಾರಿಗೆ ಜಮೈಕಾದ ನಾಯಕರೊಬ್ಬರು ಭಾರತಕ್ಕೆ ದ್ವಿಪಕ್ಷೀಯ ಚರ್ಚೆಗಾಗಿ ಭೇಟಿ ನೀಡಿದ್ದಾರೆ.

Leave a Comment

Leave a Reply

Your email address will not be published. Required fields are marked *