Mangalore : ಅಪಘಾತದಲ್ಲಿ ಸಿಲುಕಿದ ತಾಯಿಯ ರಕ್ಷಣೆಗೆ ಯತ್ನಿಸಿದ ಕರಾವಳಿ ಹುಡುಗಿ – ಬಾಲಕಿಯ ಕಾರ್ಯಕ್ಕೆ ಟ್ವೀಟ್ ಮಾಡಿ ಶ್ಲಾಘಿಸಿದ ಸಿಎಂ ಸಿದ್ದರಾಮಯ್ಯ

Spread the love

ನ್ಯೂಸ್ ಆ್ಯರೋ : ಇತ್ತೀಚಿನ ದಿನಗಳಲ್ಲಿ ಅಪಘಾತ ನಡೆದಾಗ ಜನರು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸುದರಲ್ಲೇ ಮಗ್ನರಾಗಿಬಿಡುತ್ತಾರೆ. ಆದರೆ ಇಲ್ಲೊಬ್ಬ ಬಾಲಕಿ ಅಪಘಾತ ಸಂಭವಿಸಿದಾಗ  ಓಡೋಡಿ ಬಂದು ಮಹಿಳೆಯ ಸಹಾಯಕ್ಕೆ ಧಾವಿಸಿದ್ದಾಳೆ.

ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದ್ದು, ಮಹಿಳೆ ರಿಕ್ಷಾದ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಈ ಸಂದರ್ಭದಲ್ಲಿ ಅಲ್ಲೇ ಪಕ್ಕದಲ್ಲಿ ಇದ್ದ ಬಾಲಕಿ ಓಡಿ ಬಂದು, ಯಾರ ಸಹಾಯುಕ್ಕೂ ಕಾಯದೇ ರಿಕ್ಷಾವನ್ನು ಮೇಲೆತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಆಟೋ ಎತ್ತಿ ತಾಯಿಯನ್ನು ಕಾಪಾಡಿದ ಮಂಗಳೂರಿನ ಬಾಲಕಿಗೆ ಸಿಎಂ ಸಿದ್ದರಾಮಯ್ಯ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಅಪಘಾತವಾದಾಗ ಮೊಬೈಲ್ ನಲ್ಲಿ ವಿಡಿಯೋ ಮಾಡುವ ಈ ಕಾಲದಲ್ಲಿ ಬಾಲಕಿಯ ಸಾಹಸ ಸಮಾಜಕ್ಕೆ ಸಂದೇಶ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ, ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಬಾಲಕಿಯ ಸಮಯಪ್ರಜ್ಞೆ, ಧೈರ್ಯ ಶ್ಲಾಘನೀಯ. ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್ ಮೂಲಕ ವೀಡಿಯೋ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡಿದ್ದೆ, ಇದು ಭವಿಷ್ಯದ ದಿನಗಳ ಬಗ್ಗೆ ನನ್ನಲ್ಲಿ ಆತಂಕವನ್ನೂ ಮೂಡಿಸಿತ್ತು. ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ. ಅಪಘಾತ, ಬೆಂಕಿ ಅನಾಹುತ, ಹೃದಯಾಘಾತ ಇಂತಹ ತುರ್ತು ಸಂದರ್ಭದಲ್ಲಿ ಸಂತ್ರಸ್ತರ ಪಾಲಿಗೆ ಪ್ರತಿ ಸೆಕೆಂಡ್ ಕೂಡ ಅಮೂಲ್ಯ. ಈ ವೇಳೆ ಮಾನವೀಯತೆ ಮರೆಯದಿರಿ ಎಂದು ಆಕೆಯ ಕಾರ್ಯಕ್ಕೆ ಶ್ಲಾಘಿಸಿದ್ದಾರೆ.

Leave a Comment

Leave a Reply

Your email address will not be published. Required fields are marked *