ಇಂದು ಹೈಕೋರ್ಟ್ ನಲ್ಲಿ ಸಿಎಂ ಭವಿಷ್ಯ ನಿರ್ಧಾರ; ಸಿಎಂಗೆ ಸಿಗುತ್ತಾ ಮುಡಾ ರಿಲೀಫ್..?
ನ್ಯೂಸ್ ಆ್ಯರೋ : ಸಿಎಂ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದು, ಇಂದು ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠದಲ್ಲಿ ಮುಡಾ ಭವಿಷ್ಯ ನಿರ್ಧಾರವಾಗಲಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದರು.
ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಬಗ್ಗೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಶನಿವಾರ ವಿಚಾರಣೆಯನ್ನು ಮುಂದೂಡಿತ್ತು. ಇದೀಗ ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ನಡೆಸಲಿದ್ದು, ಮುಡಾ ಹಗರಣದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ.
ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮುಡಾ ಹಗರಣದ ಇನ್ನು ಕೆಲವೇ ಗಂಟೆಗಳಲ್ಲಿ ಹೊರ ಬೀಳಲಿದೆ. ಇದೀಗ ರಾಜ್ಯದ ಜನರ ಚಿತ್ತ ಹೈಕೋರ್ಟ್ ನತ್ತ ಮುಖ ಮಾಡಿದೆ. ಮೂಡ ಹಗರಣದಿಂದ ಸಿಎಂ ರಿಲೀಫ್ ಪಡೆದುಕೊಳ್ಳಲಿದ್ದಾರಾ ಎಂದು ನಿರ್ಣಯವಾಗಲಿದೆ.
Leave a Comment