ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ
ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ರಾಜು ಪೂಜಾರಿ ಬೈಂದೂರು ಅವರಿಗೆ ಟಿಕೆಟ್ ನೀಡಿ ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ.
ಈಗಾಗಲೇ ಬಿಜೆಪಿ ಸಹ ತನ್ನ ಅಭ್ಯರ್ಥಿಯನ್ನು ಕಿಶೋರ್ ಕುಮಾರ್ ಪುತ್ತೂರ್ಗೆ ಟಿಕೆಟ್ ನೀಡಲಾಗಿದ್ದು, ಇದೇ ಅಕ್ಟೋಬರ್ 21ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸ್ಥಾನದ ಮರು ಚುನಾವಣೆ ಅ.21 ರಂದು ಉಪಚುನಾವಣೆ ನಡೆಯಲಿದೆ.
ಕೋಟಾ ಶ್ರೀನಿವಾಸ್ ಪೂಜಾರಿ ಅವರು ಉಡುಪಿ ಚಿಕ್ಕಮಗಳೂರು ಲೋಕಾಸಭಾ ಕ್ಷೇತ್ರದಿಂದ ಗೆದ್ದು ಸಂಸತ್ ಪ್ರವೇಶ ಮಾಡಿದ್ದರಿಂದ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಈ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದೆ. ಕಾಂಗ್ರೆಸ್ನಿಂದ ಐವರ ಹೆಸರುಗಳು ಕೇಳಿಬಂದಿದ್ದವು. ಭುಜಂಗ ಶೆಟ್ಟಿ, ಬೈಂದೂರಿನ ರಾಜು ಪೂಜಾರಿ, ಹರಿಪ್ರಸಾದ್ ರೈ, ಡಿ.ಆರ್.ರಾಜು ಮತ್ತು ಉದಯ್ ಕುಮಾರ್ ಶೆಟ್ಟು ಮುನಿಯಾಲು ಅವರ ಹೆಸರುಗಳು ಕೇಳಿಬಂದಿದ್ದವು. ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ರಾಜು ಪೂಜಾರಿ ಅವರಿಗೆ ಮಣೆ ಹಾಕಿದೆ. ರಾಜು ಪೂಜಾರಿ ಬೈಂದೂರು ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷರಾಗಿದ್ದಾರೆ.
Leave a Comment