ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರು ವಿಧಿವಶ; ಅಂತಿಮ ದರ್ಶನ ಪಡೆದ ನಟಿ ರಮ್ಯಾ
ನ್ಯೂಸ್ ಆ್ಯರೋ: ಕರ್ನಾಟಕದ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ತಡರಾತ್ರಿ ಸದಾಶಿವ ನಗರದ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಟಿ ರಮ್ಯಾ ಅವರು ಆಗಮಿಸಿದ್ದು ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.
ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ನಟಿ ರಮ್ಯಾ ಅವರು ಕಣ್ಣೀರು ಹಾಕಿದ್ದಾರೆ. ದುಃಖದಲ್ಲೇ ಸದಾಶಿವ ನಗರದ ನಿವಾಸಕ್ಕೆ ಬಂದ ರಮ್ಯಾ ಅವರು, ಎಸ್.ಎಂ ಕೃಷ್ಣರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.
ಎಸ್.ಎಂ ಕೃಷ್ಣ ಅವರ ಅಂತಿಮ ದರ್ಶನ ಪಡೆಯಲು ರಮ್ಯಾ ಅವರು ಬರುವಾಗ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಏನನ್ನು ಉತ್ತರಿಸಲಿಲ್ಲ. ನಾನು ಏನೂ ಹೇಳುವ ಪರಿಸ್ಥಿತಿಯಲ್ಲಿ ಇಲ್ಲ. ಪ್ಲೀಸ್ ನನಗೆ ಹೋಗೋಕೆ ದಾರಿ ಬಿಡಿ. ಏನೂ ಹೇಳುವುದಕ್ಕೆ ಆಗಲ್ಲ ಎಂದು ಹೇಳಿ ಹೋದರು.
ಎಸ್.ಎಂ.ಕೃಷ್ಣ ಅವರ ನೇತೃತ್ವದಲ್ಲೇ ರಾಜಕಾರಣಕ್ಕೆ ಕಾಲಿಟ್ಟ ರಮ್ಯಾ ಅವರು ಕಾಂಗ್ರೆಸ್ ಪಕ್ಷದಲ್ಲಿ ಅತ್ಯಂತ ಶೀಘ್ರವಾಗಿ ಬೆಳೆದರು. ತಮ್ಮ ಸೆಲೆಬ್ರಿಟಿ ಇಮೇಜ್‌ನಿಂದಾಗಿ ಹೈಕಮಾಂಡ್‌ನಲ್ಲಿ ಶೀಘ್ರವಾಗಿ ಗುರುತಿಸಿಕೊಂಡಿದ್ದರು.
ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿ ಹೈಕಮಾಂಡ್‌ನ ಪ್ರಭಾವಶಾಲಿ ನಾಯಕರ ಜೊತೆ ನೇರವಾಗಿ ಸಂಪರ್ಕ ಸಾಧಿಸಬಲ್ಲ ರಾಜ್ಯದ ಕೆಲವೇ ಕಾಂಗ್ರೆಸ್ಸಿಗರಲ್ಲಿ ರಮ್ಯಾ ಕೂಡ ಒಬ್ಬರಾಗಿದ್ದರು. ಕೃಷ್ಣ ಅವರನ್ನು ಅಂಕಲ್ ಎಂದೇ ಕರೆಯುತ್ತಿದ್ದ ರಮ್ಯಾ, ಕೃಷ್ಣ ಅವರ ಮಾರ್ಗದರ್ಶನದಲ್ಲೇ ರಾಜಕೀಯ ನಡೆಗಳನ್ನು ಇಟ್ಟವರು. ಮಂಡ್ಯ ಜಿಲ್ಲೆಯ ಕಾಂಗ್ರೆಸ್‌ನ ಒಳ ರಾಜಕಾರಣವನ್ನು ಭೇದಿಸಿ ಸಂಸದರಾಗಲು ಈ ಮಾರ್ಗದರ್ಶನವೇ ಅವರಿಗೆ ರಕ್ಷೆಯಾಗಿತ್ತು.
Leave a Comment