ಉಡುಪಿ : ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ ಹಿನ್ನೆಲೆ – ಜಿಲ್ಲಾ ಕಾಂಗ್ರೆಸ್ ವತಿಯಿಂದ ಪಾದಯಾತ್ರೆ, ಶಾಂತಿಯುತ ಪ್ರತಿಭಟನೆ : ಪ್ರತಿಭಟನೆ ವೇಳೆ ರಾಜ್ಯಪಾಲರಿಗೆ ಧಿಕ್ಕಾರ ಕೂಗಿದ ಕಾರ್ಯಕರ್ತರು

Spread the love

ನ್ಯೂಸ್ ಆ್ಯರೋ : ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ನಿಂದ ಉಡುಪಿಯಲ್ಲೂ ಬೃಹತ್ ಪ್ರತಿಭಟನೆ ನಡೆಯಿತು.

ರಾಜ್ಯಪಾಲರ ನಡೆಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ ಕೈ ಕಾರ್ಯಕರ್ತರು, ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಭಿತ್ತಿಪತ್ರ ಪ್ರದರ್ಶಿಸಿ ಅಸಮಾಧಾನ ವ್ಯಕ್ತಪಡಿಸಿದರು.

ಉಡುಪಿಯ ಪ್ರಮುಖ ರಸ್ತೆಗಳಲ್ಲಿ ನೂರಾರು ಜನರ ಪಾದಯಾತ್ರೆ ನಡೆದಿದ್ದು, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಪ್ರಸಾದ್ ರಾಜ್ ಕಾಂಚನ್, ಮುನಿಯಾಲು ಉದಯ ಶೆಟ್ಟಿ, ಗೋಪಾಲ ಪೂಜಾರಿ, ದಿನೇಶ್ ಹೆಗ್ಡೆ ಮೊಳಹಳ್ಳಿ ಭಾಗಿಯಾಗಿದ್ದರು.

ರಮೇಶ್ ಕಾಂಚನ್, ಕಿಶನ್ ಹೆಗ್ಡೆ ಜೊತೆ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದು, ಶಾಂತಿಯುತ ಪ್ರತಿಭಟನೆ ನಡೆಸಿ ರಾಜ್ಯಪಾಲರ ವಿರುದ್ಧ ಆಕ್ರೋಶ ಹೊರಹಾಕಿದರು.

Leave a Comment

Leave a Reply

Your email address will not be published. Required fields are marked *