ರೇಣುಕಾಸ್ವಾಮಿ ಹತ್ಯೆ ಕೇಸ್​: ದರ್ಶನ್​ಗೆ ಇಲ್ಲ ಬಿಡುಗಡೆ ಭಾಗ್ಯ

hearing of-actor-darshan-bail-plea
Spread the love

ಬೆಂಗಳೂರು: ಇಂದು ಚಿತ್ರದುರ್ಗ ರೇಣುಕಾಸ್ವಾಮಿ ಭೀಕರ ಹತ್ಯೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸಿದ ಬೆಂಗಳೂರಿನ 57ನೇ ಸಿಸಿಎಚ್​ ನ್ಯಾಯಾಲಯ, ಅರ್ಜಿ ವಿಚಾರಣೆಯನ್ನು ಮತ್ತೊಮ್ಮೆ ಮುಂದೂಡಿದೆ.

ಈ ಹಿಂದೆ ಸೆ.30ಕ್ಕೆ ಆರೋಪಿ ದರ್ಶನ್​ ಜಾಮೀನು ಅರ್ಜಿ ಮುಂದೂಡಿದ್ದ ಕೋರ್ಟ್​, ಅ.04ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿತ್ತು. ಅದರ ಅನ್ವಯ ಇಂದು ಸುದೀರ್ಘ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಎಚ್​ ನ್ಯಾಯಾಲಯ, ಇದೀಗ ಅರ್ಜಿ ವಿಚಾರಣೆಯನ್ನು ಮತ್ತೊಮ್ಮೆ ಮುಂದೂಡಿಕೆ ಮಾಡಿದ್ದು, ಅ.05ರ ಮಧ್ಯಾಹ್ನ 12:30ಕ್ಕೆ ವಿಚಾರಣೆ ಕರೆದಿದೆ.

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆದಿದ್ದು ಹಿರಿಯ ವಕೀಲ ಸಿವಿ ನಾಗೇಶ್, ದರ್ಶನ್ ಪರವಾಗಿ ವಾದ ಮಂಡಿಸಿದರು. ಪೊಲೀಸರ ತನಿಖೆಯನ್ನು ತೀವ್ರವಾಗಿ ಟೀಕಿಸಿದ ನಾಗೇಶ್, ಪ್ರಕರಣದಲ್ಲಿ ಪೊಲೀಸರೇ ಸಾಕ್ಷ್ಯಗಳನ್ನು ಸೃಷ್ಟಿಸಿದ್ದಾರೆಂದು ವಾದಿಸಿದರು.

ಆರೋಪ ಪಟ್ಟಿಯಲ್ಲಿ ದಾಖಲಿಸಿರುವ ಪ್ರಕರಣದ ಮಾಹಿತಿಗೂ, ಸಾಕ್ಷ್ಯಗಳು ನೀಡಿರುವ ಹೇಳಿಕೆಗೂ ಸಾಕಷ್ಟು ವ್ಯತ್ಯಾಸ ಇದೆಯೆಂದು ವಾದಿಸಿದ ಸಿವಿ ನಾಗೇಶ್, ರಸ್ತೆ ಬದಿ ಮ್ಯಾಜಿಕ್ ಮಾಡುವವರು ಖಾಲಿ ಡಬ್ಬ ತೋರಿಸಿ ಮೊಲ ಇದೆ ಎನ್ನುತ್ತಾರಲ್ಲ, ಪೊಲೀಸರ ಈ ತನಿಖೆ ಸಹ ಹಾಗೆಯೇ ಇದೆ ಎಂದರು.

Leave a Comment

Leave a Reply

Your email address will not be published. Required fields are marked *