ಕಾಪು ಮಾರಿಗುಡಿಗೆ ಕ್ರಿಕೆಟರ್ ಸೂರ್ಯ ಕುಮಾರ್ ಯಾದವ್ ದಂಪತಿ ಭೇಟಿ – ಪತ್ನಿಯ ತವರೂರಲ್ಲಿ ಮಿಸ್ಟರ್ 360° ವಿವಾಹ ವಾರ್ಷಿಕೋತ್ಸವ ಆಚರಣೆ
ನ್ಯೂಸ್ ಆ್ಯರೋ : ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಇಂದು ಭಾರತೀಯ ಕ್ರಿಕೆಟ್ ತಂಡದ ಆಟಗಾರ ಸೂರ್ಯ ಕುಮಾರ್ ಯಾದವ್ ದಂಪತಿ ಭೇಟಿ ನೀಡಿದರು.
2024ರ ಟಿ20 ವಿಶ್ವಕಪ್ ಭಾರತ ತನ್ನ ಮುಡಿಗೆರಿಸಿಕೊಂಡಿದ್ದು, ಭಾರತ ತಂಡದಲ್ಲಿ ಆಡಿ ಟಿ20 ವಿಶ್ವಕಪ್ ಗೆಲುವಿಗೆ ಕಾರಣಿಕರ್ತರಾದ ಸೂರ್ಯ ಕುಮಾರ್ ಯಾದವ್ ಅವರನ್ನು ಕಾಪು ಶಾಸಕರು, ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಅಭಿನಂದಿಸಿದರು.
ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಅರ್ಚಕರು ಪ್ರಾರ್ಥನೆ ಸಲ್ಲಿಸಿ ಪ್ರಸಾದವನ್ನು ನೀಡಿ ಹರಸಿದರು.
ಸೂರ್ಯಕುಮಾರ್ ಅವರ ಪತ್ನಿ ದೀವಿಶಾ ಶೆಟ್ಟಿ ಮೂಲತ ಕರಾವಳಿಗರು. ಆದ್ದರಿಂದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸೋಮವಾರವೇ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.
ಇದೇ ಸಂದರ್ಭ ಎಂಟನೇ ವಿವಾಹ ವಾರ್ಷಿಕೋತ್ಸವವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ನಿಲ್ದಾಣದ ‘ಪ್ರಣಾಮ್’ ತಂಡದವರು ದಂಪತಿ ಜೊತೆ ಕೇಕ್ ಕತ್ತರಿಸಿ ಸಂಭ್ರಮಿಸಿದ್ದರು.
Leave a Comment