
ಕೇರಳ ಸಿಎಂಗೆ ಬಂತು ಬೆದರಿಕೆ ಕರೆ, ಅಲರ್ಟ್ ಆದ ಖಾಕಿ – ನಂಬರ್ ಟ್ರೇಸ್ ಮಾಡಿದ ಪೋಲಿಸರು ಶಾಕ್ ಆಗಿದ್ದೇಕೆ?
- ಕ್ರೈಂ ಸುದ್ದಿ
- November 4, 2023
- No Comment
- 1117
ನ್ಯೂಸ್ ಆ್ಯರೋ : ಅಪ್ರಾಪ್ತ ಬಾಲಕನೊಬ್ಬ ಮುಖ್ಯಮಂತ್ರಿಗೆ ಬೆದರಿಕೆ ಕರೆ ಮಾಡಿರುವ ಘಟನೆ ಕೇರಳದಲ್ಲಿ ನಡೆದಿದೆ.
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಅಪ್ರಾಪ್ತ ಬಾಲಕನೊಬ್ಬ ಕರೆ ಮಾಡಿ ಬೆದರಿಕೆ ಹಾಕಿದ್ದರಿಂದ ವಿಜಯನ್ ಅವರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.
ರಾತ್ರಿ ವೇಳೆಯಲ್ಲಿ ಕೇರಳ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯ ನಿಯಂತ್ರಣ ಕೊಠಡಿಗೆ ದೂರವಾಣಿ ಕರೆ ಮಾಡಿದ 12 ವರ್ಷದ ಬಾಲಕ ಮುಖ್ಯಮಂತ್ರಿ ಪಿಣರಾಯಿ ಅವರಿಗೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಕೂಡಲೇ ತನಿಖೆ ಪ್ರಾರಂಭಿಸಿದ ಪೊಲೀಸರು ಬಾಲಕನ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಬಾಲಕನ ಪೋಷಕರು 7 ನೇ ತರಗತಿಯಲ್ಲಿ ಓದುತ್ತಿರುವ ತಮ್ಮ ಮಗ ಮೊಬೈಲ್‌ನಲ್ಲಿ ಆಟವಾಡುವ ವೇಳೆ ಅಚಾತುರ್ಯವಾಗಿ ಕಂಟ್ರೋಲ್ ರೂಮ್‌ಗೆ ಕರೆ ಮಾಡಿದ್ದಾನೆ ಎಂದು ಹೇಳಿದ್ದಾರೆ.
ಪೋಷಕರ ಹೇಳಿಕೆಯ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಪೊಲೀಸರು ತನಿಖೆ ಮುಂದುವರಿಸುವುದಾಗಿ ತಿಳಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 118 (ಬಿ)ಯಡಿ ಬಾಲಕ ಬಳಸಿರುವ ಮೊಬೈಲ್ ಸಂಖ್ಯೆಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.