
Chaithra : ಬಹುದಿನಗಳ ಬಳಿಕ ಕ್ಯಾಮೆರಾ ಕಣ್ಣಿಗೆ ಬಿದ್ದ ಚೈತ್ರಾ ಫುಲ್ ಜೋಶ್ – ಸ್ನೇಹಿತನಿಗೆ ವಂಚಿಸಿದ ಪ್ರಕರಣದಲ್ಲಿ ಬ್ರಹ್ಮಾವರ ಕೋರ್ಟ್ ಗೆ ಹಾಜರು, ಮತ್ತೆ ಬೆಂಗಳೂರು ಜೈಲಿನತ್ತ…
- ಕರಾವಳಿಕ್ರೈಂ ಸುದ್ದಿ
- November 1, 2023
- No Comment
- 79
ನ್ಯೂಸ್ ಆ್ಯರೋ : ಬಟ್ಟೆ ಅಂಗಡಿ ಹಾಕಿಸಿಕೊಡುವುದಾಗಿ ನಂಬಿಸಿ ಐದು ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಡಿ ವಾರೆಂಟ್ ಮೂಲಕ ಕುಂದಾಪುರ ಮೂಲದ ಚೈತ್ರಾಳನ್ನು ವಿಚಾರಣೆಗಾಗಿ ಪೊಲೀಸರು ಮಂಗಳವಾರ ಬ್ರಹ್ಮಾವರ ನ್ಯಾಯಾಲಯಕ್ಕೆ ಹಾಜರುಪಡಿಸಿ, ವಿಚಾರಣೆ ನಡೆಸಿದ್ದಾರೆ.
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿದ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಚೈತ್ರಾಳನ್ನು ಪೊಲೀಸ್ ಕಸ್ಟಡಿಗೆ ಪಡೆದ ಕೋಟ ಪೊಲೀಸರು ಮಂಗಳವಾರ ಬೆಂಗಳೂರಿನಿಂದ ಕೋಟಕ್ಕೆ ಕರೆ ತಂದಿದ್ದರು.
ನ್ಯಾಯಾಲಯಕ್ಕೆ ಹಾಜರುಪಡಿಸಿದ ಚೈತ್ರಾಳನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಆದರೆ ನ್ಯಾಯಾಲಯವು ಆಕೆಯನ್ನು ಒಂದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿತು.
ಬಳಿಕ ಬ್ರಹ್ಮಾವರ ಸಿಪಿಐ ದಿವಾಕರ್ ಪಿಎಂ ನೇತೃತ್ವದಲ್ಲಿ ಕೋಟ ಪಿಎಸ್‌ಐ ಶಂಭುಲಿಂಗಯ್ಯ ತಂಡ ಆಕೆಯನ್ನು ವಿಚಾರಣೆ ನಡೆಸಿ, ಹೇಳಿಕೆಯನ್ನು ಪಡೆದುಕೊಂಡಿತು. ಒಂದು ದಿನ ವಿಚಾರಣೆ ನಡೆಸಿದ ಪೊಲೀಸರು ಚೈತ್ರಾಳನ್ನು ಮರಳಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪೊಲೀಸರ ವಿಚಾರಣೆ ಈಗಾಗಲೇ ಮುಗಿದಿದ್ದು, ಈಗ ಚೈತ್ರಾರನ್ನು ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದುಕೊಂಡು ಹೋಗಲಾಗುತ್ತದೆ. ಬಹು ದಿನಗಳ ಬಳಿಕ ಮಾಧ್ಯಮಗಳ ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡ ಚೈತ್ರಾ ಲವಲವಿಕೆಯಿಂದಲೇ ಇದ್ದು, ಕ್ಯಾಮೆರಾ ಕಾಣುತ್ತಲೇ ಕೈ ಬೀಸಿದ್ದಾರೆ.
ಕೋಡಿ ನಿವಾಸಿ ಸುದಿನ ಎನ್ನುವವರು ಚೈತ್ರಾ ಮೇಲೆ ಪ್ರಕರಣ ದಾಖಲಿಸಿದ್ದು, ತನಗೆ ಬಿಜೆಪಿ ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿರುವ ಸಚಿವರು, ಮಂತ್ರಿಗಳ, ಶಾಸಕರ ನಿಕಟ ಸಂಪರ್ಕವಿದ್ದು ನಿನಗೆ ಬಟ್ಟೆಯಂಗಡಿ ನಿರ್ಮಿಸಿಕೊಡುತ್ತೇನೆ ಎಂದು 2018-2023ರ ಅವಧಿಯಲ್ಲಿ ಅಂಗಡಿ ನಿರ್ಮಾಣಕ್ಕೆ ಐದು ಲಕ್ಷ ಹಣವನ್ನು ಹಂತ ಹಂತವಾಗಿ ಪಡೆದಿದ್ದಾಳೆ. ಮೂರು ಲಕ್ಷವನ್ನ ಚೈತ್ರಾ ಖಾತೆಗೆ ವರ್ಗಾಯಿಸಿದ್ದೆ. ಉಳಿದ ಎರಡು ಲಕ್ಷ ಹಣವನ್ನು ನಗದು ರೂಪದಲ್ಲಿ ನೀಡಿರುವುದಾಗಿ ದೂರಿನಲ್ಲಿ ತಿಳಿಸಿದ್ದರು.