ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ ಚಿನ್ನ, 150 ಗ್ರಾಂ ಬೆಳ್ಳಿ ವಶ

ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ ಚಿನ್ನ, 150 ಗ್ರಾಂ ಬೆಳ್ಳಿ ವಶ

ನ್ಯೂಸ್ ಆರೋ: ಕನ್ನಡ ಹಾಗೂ ಪರಭಾಷೆಯ ಸಿನಿಮಾಗಳಲ್ಲೂ ಮಿಂಚಿರುವ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ನಡೆದಿದೆ. ಚಿನ್ನಾಭರಣ ಕಳುವಾಗಿರುವ ಬಗ್ಗೆ ಛಾಯಾ ಸಿಂಗ್ ತಾಯಿ ಚಮನಲತಾ ಪೊಲೀಸರಿಗೆ ದೂರು ನೀಡಿದ್ದರು.

ತನಿಖೆ ನಡೆಸಿದ ಪೊಲೀಸರು ಮನೆಗೆಲಸದಾಕೆಯನ್ನು ಬಂಧಿಸಿದ್ದಾರೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅಮೃತಧಾರೆ’ ಸೀರಿಯಲ್‌ನಲ್ಲಿ ಭೂಮಿಕಾ ಪಾತ್ರವನ್ನ ನಿಭಾಯಿಸುತ್ತಿದ್ದಾರೆ.

ಬೆಂಗಳೂರಿನ ಬಸವೇಶ್ವರನಗರದಲ್ಲಿ ನಟಿ ಛಾಯಾ ಸಿಂಗ್ ಅವರ ತಾಯಿ ಮನೆ ಇದೆ. ಇದೇ ಮನೆಯ ಕಳ್ಳತನ ನಡೆದಿದೆ. ಚಿನ್ನಾಭರಣ ಹಾಗೂ ಬೆಳ್ಳಿಯ ಆಭರಣಗಳು ಕಳುವಾಗಿರುವ ಬಗ್ಗೆ ನಟಿ ಛಾಯಾ ಸಿಂಗ್ ತಾಯಿ ಚಮನಲತಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ಕೈಗೊಂಡರು. ಬಳಿಕ ಆರೋಪಿ ಮನೆಗೆಲಸದಾಕೆಯನ್ನ ಬಂಧಿಸಿದ ಪೊಲೀಸರು ಆಭರಣಗಳನ್ನ ವಶಕ್ಕೆ ಪಡೆದಿದ್ದಾರೆ.

ನಟಿ ಛಾಯಾ ಸಿಂಗ್ ಅವರ ತಾಯಿ ಚಮನಲತಾ ಮನೆಯಲ್ಲಿ ಉಷಾ ಎಂಬಾಕೆ ಮನೆ ಕೆಲಸಕ್ಕಿದ್ದರು. ಕೆಲ ವರ್ಷಗಳಿಂದ ಚಮನಲತಾ ಮನೆಯಲ್ಲಿ ಉಷಾ ಕೆಲಸ ಮಾಡುತ್ತಿದ್ದರು. ಮನೆಯವರ ಕಣ್ತಪ್ಪಿಸಿ ಚಿನ್ನಾಭರಣ ಹಾಗೂ ಬೆಳ್ಳಿಯ ಆಭರಣಗಳನ್ನ ಉಷಾ ಕದ್ದಿದ್ದರು.

66 ಗ್ರಾಂ ಚಿನ್ನ, 150 ಗ್ರಾಂ ಬೆಳ್ಳಿ ಸೇರಿದಂತೆ ಮನೆಯಲ್ಲಿ ಕೆಲವು ಆಭರಣಗಳು ಕಾಣೆಯಾಗಿರುವುದನ್ನು ಗಮನಿಸಿದ ಚಮನಲತಾ ಪೊಲೀಸರಿಗೆ ದೂರು ನೀಡಿದರು. ಪೊಲೀಸರು ತನಿಖೆ ನಡೆಸಿದ ಬಳಿಕ ಉಷಾ ಕಳ್ಳತನ ಮಾಡಿರುವುದು ಪತ್ತೆಯಾಗಿದೆ. ಮನೆಗೆಲಸದಾಕೆ ಉಷಾಳನ್ನ ಬಂಧಿಸಿದ ಪೊಲೀಸರು ಚಿನ್ನಾಭರಣ ಹಾಗೂ ಬೆಳ್ಳಿಯ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ.

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *