ಪರಿಷತ್‌ನಲ್ಲಿ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಆರೋಪ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಣ್ಣೀರು
ನ್ಯೂಸ್ ಆ್ಯರೋ: ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಇಂದು ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಮಾತಿಗೆ ಕಾಂಗ್ರೆಸ್ ಸದಸ್ಯರು ಕೆರಳಿ ಕೆಂಡವಾಗಿದ್ದಾರೆ. ತಮ್ಮ ವಿರುದ್ಧ ಸಿ.ಟಿ ರವಿ ಅವರು ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕಣ್ಣೀರು ಹಾಕಿದ್ದಾರೆ.
ವಿಧಾನಪರಿಷತ್ ಕಲಾಪದಲ್ಲಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎನ್ನಲಾಗಿದೆ. ಸಿ.ಟಿ ರವಿ ಮಾತಿಗೆ ಸದನದಲ್ಲಿ ಗದ್ದಲ, ಕೋಲಾಹಲ ಉಂಟಾಗಿದೆ. ಸಭಾಪತಿ ಬಸವರಾಜ ಹೊರಟ್ಟಿ ಅವರು ಸದನವನ್ನು ಅರ್ಧ ಗಂಟೆಗಳ ಕಾಲ ಮುಂದೂಡಿಕೆ ಮಾಡಿದ್ದಾರೆ.
ಅಶ್ಲೀಲ ಪದ ಬಳಕೆ ನೊಂದಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಭಾಪತಿ ಬಸವರಾಜ ಹೊರಟ್ಟಿ ಮುಂದೆ ಕಣ್ಣೀರಿಟ್ಟಿದ್ದಾರೆ. ಈ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಸದನದ ಅಷ್ಟು ಆಡಿಯೋ, ವಿಡಿಯೋ ಪರಿಶೀಲಿಸಲು ಸೂಚನೆ ನೀಡಿದ್ದಾರೆ.
ಬಸವರಾಜ ಹೊರಟ್ಟಿ ಅವರ ಜೊತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚರ್ಚೆ ನಡೆಸಿದ್ದು, ಸಿ.ಟಿ ರವಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಆಗ್ರಹಿಸಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಸಿಟಿ ಅವಾಚ್ಯ ಪದಬಳಕೆ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗಿದೆ, ಸುವರ್ಣಸೌಧದ ಸಿಎಂ ಕಚೇರಿಗೆ ಸಚಿವರಾದ ಬೈರತಿ ಸುರೇಶ್, ಡಾ ಸುಧಾಕರ್ ತೆರಳಿದ್ದು ಡಿಸಿಎಂ ಡಿ ಕೆ ಶಿವಕುಮಾರ್ ಕೂಡ ಉಪಸ್ಥಿತರಿದ್ದರು. ಪರಿಷತ್‌ನಲ್ಲಿ ನಡೆದ ಘಟನೆ ಬಗ್ಗೆ ಸಿಎಂಗೆ ಸಚಿವರು ಮಾಹಿತಿ ನೀಡಿದ್ದು, ಸಿ ಟಿ ರವಿ ಅಮಾನತ್ತಿನ ಬಗ್ಗೆ ಸಮಾಲೋಚೆ ನಡೆಸಿದ್ದಾರೆ ಎಂದು ತಿಳುದುಬಂದಿದೆ.
Leave a Comment