ಮತ್ತೆ ಸೈಕ್ಲೋನ್ ಎಂಟ್ರಿ, ತುಂತುರು ಮಳೆ ಶುರು; 7 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್!
ನ್ಯೂಸ್ ಆ್ಯರೋ: ಫೆಂಗಲ್ ಚಂಡಮಾರುತ ಅಬ್ಬರದಿಂದ ದಕ್ಷಿಣ ಭಾರತದ ರಾಜ್ಯಗಳು ಚೇತರಿಸಿಕೊಳ್ಳುವ ಮುನ್ನವೇ ಮತ್ತೊಂದು ಚಂಡಮಾರುತ ತನ್ನ ಅಬ್ಬರವನ್ನು ಸದ್ದಿಲ್ಲದೇ ಶುರು ಮಾಡಿದೆ. ನೈಋತ್ಯ ಬಂಗಾಳ ಕೊಲ್ಲೆಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪರಿಣಾಮ ಹಲವು ರಾಜ್ಯಗಳಿಗೆ ಭಾರೀ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಪ್ರಸ್ತುತ ಶ್ರೀಲಂಕಾ ಕರಾವಳಿಯಲ್ಲಿ ಪ್ರಭಾವ ತೋರುತ್ತಿರುವ ಚಂಡಮಾರುತ ಮುಂದಿನ 24 ಗಂಟೆ ವೇಳೆಗಳಲ್ಲಿ ಪಶ್ಚಿಮ-ವಾಯುವ್ಯ ಕಡೆಗೆ ಚಲಿಸಲಿದ್ದು, ಇದರೊಂದಿಗೆ ತಮಿಳುನಾಡು ಕರಾವಳಿಯ ಕಡೆಗೆ ಎಂಟ್ರಿ ಕೊಡಲಿದೆ. ಇದರೊಂದಿಗೆ ಕರ್ನಾಟದಲ್ಲೂ ಭಾರೀ ಮಳೆಯ ನಿರೀಕ್ಷೆ ಇದ್ದು, ರಾಜ್ಯದ 7 ಜಿಲ್ಲೆಗಳಿಗೆ ಮಳೆಯ ಅಲರ್ಟ್ ನೀಡಲಾಗಿದೆ.
ಇದರೊಂತೆ ಎಎಂಡಿ ಕರ್ನಾಟದಲ್ಲಿ ಇಂದು ಭಾರೀ ಮಳೆಯ ಅಲರ್ಟ್ ನೀಡಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ಚಾಮರಾಜನಗರ, ರಾಮನಗರ, ಕೋಲಾರ, ಮೈಸೂರು, ಮಂಡ್ಯ ಮತ್ತು ಕೊಡಗು ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ ನೀಡಲಾಗಿದೆ.
ಉಳಿದಂತೆ ಇತರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ. ಆದರೆ ಉತ್ತರ ಒಳ ಕರ್ನಾಟಕ, ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳು ಶುಷ್ಕ ವಾತಾವರಣ ಮುಂದುವರಿಯಲಿದೆ.
ಇನ್ನು, ಡಿಸೆಂಬರ್ 13 ರಂದು ಉಡುಪಿ, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.
Leave a Comment