ವಾಲ್ಮೀಕಿ ನಿಗಮದ 187 ಕೋಟಿ ಹಗರಣದಲ್ಲಿ ಇಡಿ ಎರಡನೇ ದೊಡ್ಡ ಬೇಟೆ – ಶಾಸಕ ದದ್ದಲ್ ಮಾಜಿ ಪಿಎ ಪಂಪಣ್ಣ ಇಡಿ ವಶಕ್ಕೆ..!
ನ್ಯೂಸ್ ಆ್ಯರೋ : ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿ ನಿನ್ನೆಯಿಂದ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಇದೀಗ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ನಿಗಮದ ಅಧ್ಯಕ್ಷ ಶಾಸಕ ಬಸನಗೌಡ ದದ್ದಲ್ ಅವರ ಮಾಜಿ ಆಪ್ತ ಸಹಾಯಕ ಪಂಪಣ್ಣ ಅವರನ್ನು ED ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಸುದೀರ್ಘವಾಗಿ 24 ಗಂಟೆಗಳಿಂದ ವಿವಿಧ ದಾಖಲೆಗಳನ್ನು ಪರಿಶೀಲನೆ ಮಾಡಿದ ಬಳಿಕ ಈಗ ಇಡಿ ಅಧಿಕಾರಿಗಳು ಪಂಪಣ್ಣ ಅವರನ್ನು ರಾಯಚೂರಿನಲ್ಲಿ ನಿವಾಸದಲ್ಲಿ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಇದೇ ಕೇಸ್‌ನಲ್ಲಿ ನಿನ್ನೆ ಮಾಜಿ ಸಚಿವ ಬಿ.ನಾಗೇಂದ್ರ ಅವರ ಪಿಎ ಹರೀಶ್ ನನ್ನು ಇಡಿ ಬಂಧಿಸಿತ್ತು. ನಾಗೇಂದ್ರ ಅವರಿಗೆ ಸಂಬಂಧಿಸಿ ಇನ್ನು ನಾಲ್ವರು ಆಪ್ತರನ್ನು ಇಡಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ಪಂಪಣ್ಣರಿಂದ ಹಲವು ಮಹತ್ವದ ದಾಖಲೆಗಳನ್ನು ಇಡಿ ಅಧಿಕಾರಿಗಳು ಸೀಜ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಬಡವನಾಗಿ ಬೆಳೆದು ಶಿಕ್ಷಕನಾಗಿ ವೃತ್ತಿ ಜೀವನ ಆರಂಭಿಸಿದ ಪಂಪಣ್ಣ ಬಳಿಕ ಪಿಡಿಒ ಹುದ್ದೆಗೆ ಏರಿದ್ದರು. ಬಳಿಕ ದದ್ದಲ್ ಅವರ ಪಿಎ ಆಗಿ ಕಾರ್ಯನಿರ್ವಹಿಸುತ್ತಿದ್ದರು.
Leave a Comment