ದಿನ ಭವಿಷ್ಯ 27-11-2024; ಇಂದು ಯಾವ ರಾಶಿಯವರಿಗೆ ಶುಭ ? ಅಶುಭ ತಿಳಿಯಿರಿ
ಮೇಷ ರಾಶಿ: ಇಕ್ಕಟ್ಟಿನ ಸ್ಥಿತಿಯಿಂದ ಹೊರಬರಲು ಆಗದು. ಇಂದು ಕೌಂಟುಬಿಕ ವ್ಯವಹಾರದಲ್ಲಿ ಮಹತ್ತ್ವದ ತಿರುವು ಸಿಗುವ ಸಂಭವವಿದೆ. ಕಠಿಣ ಪರಿಶ್ರಮದಿಂದ ನಿಮ್ಮ ವೃತ್ತಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುವಿರಿ. ನಿಮಗೆ ಕೊಟ್ಟ ಜವಾಬ್ದಾರಿಯನ್ನು ಅತ್ಯಂತ ಕಾಳಜಿಯಿಂದ ನೋಡಿಕೊಳ್ಳುವಿರಿ. ನಿಮ್ಮ ಯಶಸ್ಸೇ ನಿಮಗೆ ಮುಳುವಾಗಬಹುದು. ಸೌಲಭ್ಯಗಳನ್ನು ಸದುಪಯೋಗವಾಗುವಂತೆ ನೋಡಿಕೊಳ್ಳಿ. ದೇವತಾರಾಧನೆಯಿಂದ ನೆಮ್ಮದಿ ಸಿಕ್ಕಂತಾಗುವುದು. ನಿಮ್ಮ ಮಾತೇ ನಿಮಗೆ ಹಿಂದಿರುಗಿ ಬರಬಹುದು.
ವೃಷಭ ರಾಶಿ: ಒಳ್ಳೆಯ ಮಾತುಗಳು ನಿಮ್ಮ ಕಿವಿಯ ಮೇಲೆ ಬೀಳಬಹುದು. ನ್ಯಾಯಸಮ್ಮತವಾದ ದಾರಿಯಲ್ಲಿ ಇದ್ದರೂ ನಿಮಗೆ ನೋವು ತಪ್ಪದು. ಆಶಾವಾದದಲ್ಲಿಯೇ ನಿಮ್ಮ ಇಂದಿನ ದಿನವನ್ನು ಕಳೆಯುವಿರಿ. ಕಡಿಮೆ ಖರ್ಚಿನಲ್ಲಿ ಇಂದಿನ ಕಾರ್ಯವು ನೋಡಿಕೊಳ್ಳಿ. ಉತ್ಸಾಹವನ್ನು ನಿಮ್ಮವರ ಚುಚ್ಚು ಮಾತು ಕಡಿಮೆ ಮಾಡಬಹುದು. ಮಾತನಾಡಿ ತಪ್ಪಿನಲ್ಲಿ ಸಿಕ್ಕಿಬೀಳುವ ಸಾಧ್ಯತೆ ಇದೆ. ಯಾರ ಮಾತನ್ನೂ ನಿರ್ಲಕ್ಷ್ಯ ಮಾಡಬೇಡಿ. ಮಾತಿನಿಂದ ಸಿಕ್ಕಿಬೀಳುವ ಸಾಧ್ಯತೆ ಇದೆ.
ಮಿಥುನ ರಾಶಿ: ಸತ್ಯವನ್ನು ಮನೆಯರೆದು ಮುಚ್ಚಿಡುವಿರಿ. ಯಾರನ್ನಾದರೂ ಹಿಡಿದುಕೊಂಡು ನಿಮಗೆ ಆಗಬೇಕಾದ ಕೆಲಸವನ್ನು ಮಾಡುವಿರಿ. ನಿಮಗೆ ಇಂದು ತುರ್ತು ಆರ್ಥಿಕ ಸ್ಥಿತಿಯನ್ನು ಎದರಿಸಲು ಕಷ್ಟವಾಗುವುದು. ಪ್ರತಿಕೂಲವನ್ನು ಎದುರಿಸುವುದು ಕಷ್ಟವಾಗುವುದು. ನಿಮ್ಮ ಆಸಕ್ತಿಯು ಹೊಸ ಕ್ರಮದ ಹಾದಿಯಲ್ಲಿ ತೋರಿಸಬಹುದು, ನಿಮ್ಮ ಆಲೋಚನೆಗಳನ್ನು ಸರಿಯಾದ ಕಡೆ ವ್ಯಕ್ತಪಡಿಸಿ. ನಿಮ್ಮ ಮೇಲೆ ಬರುವ ನಕಾರಾತ್ಮಕ ಮಾತುಗಳನ್ನು ಅಲ್ಲಗಳೆಯಲಾರಿರಿ. ಒಂದೇ ರೀತಿಯ ಕೆಲಸದಲ್ಲಿ ನಿಮಗೆ ನಿರುತ್ಸಾಹವಿರಲಿದೆ. ನೆರೆ-ಹೊರೆಯವರ ಜೊತೆ ಮಾತು ಮಿತವಾಗಿರಲಿ.
ಕರ್ಕಾಟಕ ರಾಶಿ: ಸುಲಭದ ತುತ್ತನ್ನು ಸಂಕಷ್ಟದಿಂದ ಜೀರ್ಣಿಸಿಕೊಳ್ಳುವಿರಿ. ನಿಮ್ಮ ಮೇಲೆ ಯಾರಾದರೂ ಅಪವಾದವನ್ನು ಹಾಕಬಹುದು. ಇಂದು ಸಾಲಬಾಧೆಯು ನಿಮಗೆ ಅತಿಯಾದಂತೆ ಭಾಸವಾಗುವುದು. ಕುಟುಂಬದ ಜವಾಬ್ದಾರಿಯನ್ನು ಹೊತ್ತು ಮುನ್ನಡೆಸಲು ನಿಮಗೆ ಕಷ್ಟವೆನಿಸುವುದು. ಉದ್ಯೋಗದಲ್ಲಿ ಸ್ವಲ್ಪ ಬದಲಾವಣೆಯನ್ನು ಮಾಡಿಕೊಳ್ಳಬೇಕಾದೀತು.ಹಣಕಾಸಿನ ವಿಚಾರದಲ್ಲಿ ಜಾಗರೂಕತೆ ಮುಖ್ಯ. ದುರಭ್ಯಾಸವನ್ನು ಬೆಳೆಸಿಕೊಳ್ಳುವ ಸಾಧ್ಯತೆ ಇದೆ.
ಸಿಂಹ ರಾಶಿ: ಹೊಸ ಬಯಕೆಯನ್ನು ಇಟ್ಟು ಕಾರ್ಯವನ್ನು ಮಾಡುವಿರಿ. ಬೇಗ ಸಾಲವನ್ನು ತೀರಿಸಲು ನಿಮ್ಮ ಯೋಜನೆ ಕಾರ್ಯರೂಪಕ್ಕೆ ಬರುವುದು. ನಿಮ್ಮ ಗುರಿಯನ್ನು ತಲುಪಲು ಸಮಯ ಹಿಡಿಯುವುದು. ಎಂದುಕೊಂಡ ಕಾರ್ಯವು ಮುಗಿದು ಸಂಭ್ರಮದಲ್ಲಿ ಇರುವಿರಿ. ಮಕ್ಕಳ ಕಲಿಕೆಗೆ ಬೇಕಾದ ಸಹಕಾರವನ್ನು ನೀಡುವಿರಿ. ತಾಯಿಯ ಪ್ರೀತಿಗೆ ಸೋಲುವಿರಿ. ನೂತನ ಗೃಹವನ್ನು ಖರೀದಿ ಮಾಡುವ ಅವಕಾಶವು ಬರಬಹುದು. ಇಂದು ಸಿಕ್ಕ ಅವಕಾಶಗಳನ್ನು ಹಾಗೆಯೇ ಬಿಟ್ಟುಬಿಡುವಿರಿ.
ಕನ್ಯಾ ರಾಶಿ: ಇಂದಿನ ದುಡಿಮೆಯಲ್ಲಿ ಸಿಕ್ಕಷ್ಟು ಅಲ್ಲ, ದಕ್ಕಿದಷ್ಟು ನಿಮ್ಮದೇ. ಸಂಘರ್ಷಗಳಿಗೆ ಸುಖಾಂತ್ಯವನ್ನು ಮಾಡಿದ್ದರೆ ಮತ್ತೇನಾದರೂ ಆದೀತು. ಮಾನಸಿಕ ವಿಶ್ರಾಂತಿ ಇಲ್ಲ ಎಂದು ಅನ್ನಿಸಬಹುದು. ನಿಮ್ಮನ್ನು ನಿರ್ಲಕ್ಷಿಸುವ ಸಹೋದ್ಯೋಗಿಗಳ ಜೊತೆ ಬೆರೆಯಲು ಪ್ರಯತ್ನಿಸಿ. ವಾಹನದಲ್ಲಿ ಓಡಾಟವನ್ನು ಕಡಿಮೆಗೊಳಿಸಿ. ತೆಗೆದುಕೊಂಡ ನಿರ್ಧಾರಗಳು ಕಾರ್ಯಗತಗೊಳ್ಳುವ ಸಾಧ್ಯತೆ ಇದೆ.
ತುಲಾ ರಾಶಿ: ಗಳಿಸಿದ ಯಶಸ್ಸನ್ನು ನೀವೇ ಕೆಡಿಸಿಕೊಳ್ಳುವ ಸಾಧ್ಯತೆ ಇದೆ. ಇಂದಿನ ಕೆಲವು ಘಟನೆಗಳನ್ನು ಪ್ರತಿಕೂಲವಾಗಿ ತೆಗೆದುಕೊಂಡರೆ ಕಷ್ಟ. ಇಂದು ನಿಮಗೆ ಕಾರ್ಯದಿಂದ ತೃಪ್ತಿ ಸಿಗಲಿದೆ. ಇಂದಿನ ಸಮಯವನ್ನು ವ್ಯರ್ಥ ಮಾಡದೇ ನಿಮ್ಮದೇ ಸಮಯಸಾರಿಣಿಯನ್ನು ರೂಪಿಸಿಕೊಳ್ಳಿ. ನಿರುಪಯುಕ್ತ ವಸ್ತುಗಳನ್ನು ಇಂದು ನೀವು ಬೇರೆಯವರಿಗೆ ಕೊಡುವಿರಿ. ಅಶುಭ ಸೂಚನೆ ಬಂದರೆ ಇಂದಿನ ಪ್ರಯಾಣವನ್ನು ಮುಂದೆ ಹಾಕಿ. ವೃತ್ತಿಯಲ್ಲಿ ನಿಮಗೆ ಅನನುಕೂಲತೆಯು ಸೃಷ್ಟಿಯಾಗಬಹುದು.
ವೃಶ್ಚಿಕ ರಾಶಿ; ಅಧಿಕ ಸಂಪಾದನೆಯು ನಿಮ್ಮ ಮಾರ್ಗವನ್ನು ತಪ್ಪಿಸುವುದು. ಸಮಯಕ್ಕೆ ಸರಿಯಾಗಿ ನಿಮ್ಮ ಬುದ್ಧಿಯು ಸ್ಫುರಿಸುವುದು. ಇಂದು ನಿಮ್ಮ ಬಲವಂತದ ಪ್ರೇಮ ತಪ್ಪಿಹೋಗುವುದು. ಬಂಧುಗಳ ಎದುರು ಮಾತನ್ನು ಹರಿಬಿಡಬೇಡಿ. ಒಬ್ಬರೇ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಎಲ್ಲದರ ಬಗ್ಗೆಯೂ ನಿಮ್ಮಲ್ಲಿ ಅನಿಶ್ಚಿತತೆ ಇರುವುದು. ನಿಮ್ಮ ಪ್ರಯತ್ನವು ಸಫಲತೆಯನ್ನು ಕಾಣುವುದು. ನಿಮ್ಮ ಗುರಿಯ ಬಗ್ಗೆ ಸ್ಪಷ್ಟತೆ ಇರಲಿ. ಇಂದು ನಿಮಗೆ ಬಂಧನದಂತೆ ಅನ್ನಿಸಬಹುದು.
ಧನು ರಾಶಿ: ವಾತಾವರಣದ ಬದಲಾವಣೆಯಿಂದ ಸ್ವಾಸ್ಥ್ಯವು ಹಾಳಾಗುವುದು. ಸಾಮಾಜಿಕ ಕಾರ್ಯದಲ್ಲಿ ತೊಡಗುವುದಷ್ಟೇ ಅಲ್ಲ, ಆರ್ಥಿಕ ಸಹಾಯವನ್ನೂ ನೀವು ಮಾಡಬೇಕಾಗುವುದು. ಅತಿಯಾದ ಪ್ರಯಾಣದಿಂದ ನೀವು ದುರ್ಬಲರಾಗುವಿರಿ. ಇತ್ತೀಚಿನ ಕೆಲವು ಸ್ಥಿತಿಗಳು ಒತ್ತಡವನ್ನು ತಂದಿರಬಹುದು. ಗೊಂದಲವನ್ನು ಮಾಡಿಕೊಳ್ಳದೇ ಕೆಲಸವನ್ನು ಸರಳ ಮಾಡಿಕೊಳ್ಳಿ. ಬಿಡುವಿನ ಸಮಯವನ್ನು ಅಧಿಕ ಸಂಪಾದನೆಗಾಗಿ ಬಳಸಿಕೊಳ್ಳುವಿರಿ. ನಿಮ್ಮ ವರ್ತನೆಯು ಸಂದರ್ಭಕ್ಕೆ ಸರಿಯಾಗಿ ಇರಲಿ. ನಿಮಗೆ ಬೇಕಾದ ಯಾವುದನ್ನೂ ಸುಲಭವಾಗಿ ಪಡೆಯಲಾಗದು.
ಮಕರ ರಾಶಿ: ದೊಡ್ಡ ಮಟ್ಟದ ವ್ಯವಹಾರಕ್ಕೆ ಕೈಹಾಕಲು ಆರ್ಥಿಕ ಸಬಲತೆಯೂ ಬೇಕು. ಸುಮ್ಮನೇ ಮುಖಭಂಗವಾಗುವುದು. ಕುಟುಂಬದಲ್ಲಿ ಸಲ್ಲದ ಮಾತುಗಳು ಬರಬಹುದು. ಅದನ್ನು ತೆಗೆದುಕೊಂಡು ಹೋಗುವುದು ನಿಮ್ಮದೇ ಕಾರ್ಯವಾಗಬಹುದು. ಇನ್ನೊಬ್ಬರ ವೈಯಕ್ತಿಕ ವಿಚಾರದಲ್ಲಿ ಹೆಚ್ಚು ಆಸಕ್ತಿ ಇರುವುದು. ಬೇಕಾದ ವ್ಯಕ್ತಿಯಿಂದ ನಿಮಗೆ ಬೇಕಾದುದನ್ನು ಕೇಳಿಕೊಳ್ಳುವಿರಿ. ಸಂಗಾತಿಯ ಮಾತು ಸಂಕಟವನ್ನು ತರಬಹುದು. ತುರ್ತು ಪ್ರಯಾಣವನ್ನು ನೀವು ಮಾಡಬೇಕಾಗಬಹುದು. ಎಲ್ಲ ಕಾರ್ಯದಲ್ಲಿಯೂ ನೀವೇ ಮುಂಚೂಣಿಯಲ್ಲಿ ಇರುವಿರಿ.
ಕುಂಭ ರಾಶಿ: ಮನ ಬಂದಂತೆ ವರ್ತಿಸಲು ನೀವು ಇಂದು ಸ್ವತಂತ್ರರಲ್ಲ. ನಿಮ್ಮ ಕಾರ್ಯದ ಅನುಭವದ ಮೇಲೆ ಉತ್ತಮ ಸ್ಥಾನವು ಪ್ರಾಪ್ತವಾಗುವುದು. ಮನೆಯಿಂದ ದೂರವಿರುವ ನಿಮಗೆ ಕುಟುಂಬದವರ ನೆನಪಾಗುವುದು. ಉತ್ಸಾಹದಿಂದ ಏನನ್ನಾದರೂ ಮಾಡಲು ಹೋಗುವಿರಿ. ಸೌಲಭ್ಯ ಹೆಚ್ಚಾದಷ್ಟೂ ಆಲಸ್ಯ ಹೆಚ್ಚಾಗುವುದು ಎಲ್ಲಿಗಾದರೂ ದೂರದ ಊರಿಗೆ ಪ್ರಯಾಣದ ಯೋಜನೆಗಳನ್ನು ಮಾಡಿಕೊಳ್ಳುವಿರಿ. ದಾನದಿಂದ ನಿಮಗೆ ಸಂತೋಷವಾಗಲಿದೆ.
ಮೀನ ರಾಶಿ: ಭೂ ಉತ್ಪನ್ನಗಳ ಮಾರಾಟವನ್ನು ಹೆಚ್ಚು ಮಾಡುವಿರಿ ಮತ್ತು ಅಧಿಕಲಾಭವೂ ಆಗುವುದು. ನಿಮ್ಮ ಉದ್ಯಮಕ್ಕೆ ಮನೆಯಿಂದ ಪ್ರೋತ್ಸಾಹ ಸಹಾಯಗಳು ಸಿಗದಿದ್ದರೂ ಬಂಧುಗಳಿಂದ ಸಿಗುವುದು. ಆರಾಮಾಗಿ ಇರಲು ನೀವು ಹೆಚ್ಚು ಇಷ್ಟಪಡುವಿರಿ. ಪರರ ಕಷ್ಟದ ಬಗ್ಗೆಯೂ ನಿಮಗೆ ಅರಿವಿರಲಿ. ಆಪ್ತರ ಸಹಕಾರವನ್ನು ನೀವು ಅಲ್ಲಗಳೆಯಬಾರದು.
Leave a Comment