ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್ ರನ್ನು ಬೆಂಗಳೂರಿಗೆ ಕರೆತರಲಾಗಿದೆ ಎನ್ನಲಾಗಿದೆ.

ಆರೋಪಿಗಳನ್ನು ಮಡಿವಾಳದ ಎಫ್ ಎಸ್ ಎಲ್ ಸೆಂಟರ್ ಬಳಿಯ ಇಂಟರಾಗೇಷನ್ ಸೆಲ್ ನಲ್ಲಿರಿಸಿ ವಿಚಾರಣೆ ಮಾಡಲಾಗುತ್ತಿದೆ. ರಾತ್ರಿ ಇಂಟರಾಗೇಷನ್ ಸೆಲ್ ನಲ್ಲೇ ಶಂಕಿತರು ಇದ್ದು, ಬೆಳಗ್ಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಬೆಳಗ್ಗೆ 10:30 ಕ್ಕೆ ಕೋರಮಂಗಲದ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

ಈ ಇಬ್ಬರು ಉಗ್ರರು ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ತಲೆ ಮರೆಸಿಕೊಂಡಿದ್ದರು. ನಿನ್ನೆ ನಸುಕಿನ ಜಾವ ಬಾಂಬ್‌ ಇಟ್ಟವರನ್ನು ಎನ್‌ಐಎ ಬಂಧಿಸಿತ್ತು. ಕೊಲ್ಕತ್ತದಲ್ಲಿ ಉಗ್ರ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವಿರ್ ಹುಸೇನ್ ಶಾಜಿಬ್ ಬಂಧನವಾಗಿದ್ದು, ಮುಸಾವಿರ್ ಹುಸೇನ್ ಶಾಜಿಬ್ ಕೆಫೆಯಲ್ಲಿ ಐಇಡಿ ಇಟ್ಟು ಸ್ಪೋಟಿಸಿದ್ದರೆ, ಅಬ್ದುಲ್ ಮತೀನ್ ತಾಹಾ ಬಾಂಬ್ ಹಿಡಲು ಪ್ಲಾನ್ ಮಾಡಿದ್ದ. ಈ ಪ್ರಕರಣದಲ್ಲಿ ಮತೀನ್ ಮಾಸ್ಟರ್ ಮೈಂಡ್ ಆಗಿ ಕೆಲಸ ಮಾಡಿದ್ದ. ಬಾಂಬ್ ಇಡಲು ಸಂಚು, ಪ್ಲಾನ್ ಎಕ್ಸ್ಯೂಷನ್ , ಬ್ಲಾಸ್ಟ್ ಮಾಡಲು ಎಲ್ಲಾ ರೀತಿ ಪ್ಲಾನ್ ಮಾಡಿದ್ದ.

ಕೋಲ್ಕತ್ತಾದಲ್ಲಿ ಉಗ್ರರು ನಕಲಿ ದಾಖಲೆ ನೀಡಿ ಹೆಸರು ಬದಲಿಸಿಕೊಂಡು ವಾಸ್ತವ್ಯ ಹೂಡಿದ್ದರು. ಈ ಕಾರ್ಯಾಚರಣೆಗೆ ಎನ್ ಐಎ ಜೊತೆ ಐಬಿ ,ಪಶ್ಚಿಮ ಬಂಗಾಳ, ತೆಲಂಗಾಣ, ಕರ್ನಾಟಕ, ಕೇರಳ ಪೊಲೀಸರು ಸಹಕಾರ ನೀಡಿದ್ದರು. ಎಲ್ಲಾ ಏಜೆನ್ಸಿಗಳ ಸಹಾಯದಿಂದ ಉಗ್ರರ ಬಂಧನವಾಗಿದೆ ಎಂದು ಎನ್ ಐಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಕೊಲ್ಕಾತಾದ ಹೊರವಲಯದ ಪೂರ್ವ ಮಿಡ್ನಾಪುರ ದಿಘಾ ಎಂಬಲ್ಲಿ ಉಗ್ರರು ಹೆಸರು ಬದಲಿಸಿಕೊಂಡು ವಾಸವಿದ್ದರು. ನಿನ್ನೆ ಬೆಳಗ್ಗಿನ ಜಾವ 2.30 ರ ಸುಮಾರಿಗೆ ಉಗ್ರರಿದ್ದ ಮನೆ ಮೇಲೆ ದಾಳಿ ನಡೆಸಿದ ಎನ್‌ಐಎ ನಿದ್ದೆಯಲ್ಲಿದ್ದ ಇಬ್ಬರು ಉಗ್ರರನ್ನು ವಶಕ್ಕೆ ಪಡೆದಿದೆ. ಸದ್ಯ ಇಬ್ಬರನ್ನು ಬಂಧಿಸಿದ್ದು, ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *