ನಿಲ್ಲದ ವರುಣನ ಅಬ್ಬರ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ – ನಾಳೆ ಜುಲೈ 6ರಂದು ಪಿಯುಸಿವರೆಗಿನ ಮಕ್ಕಳಿಗೆ ರಜೆ ಘೋಷಣೆ
ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ 06-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 06-07-2024 ರಂದು ರಜೆಯನ್ನು ಘೋಷಿಸಿದೆ.
ಸಂಭಾವ್ಯ ಪ್ರವಾಹ/ಭೂಕುಸಿತ ಪ್ರದೇಶಗಳನ್ನು ಗುರುತಿಸಿ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು.
ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು.
ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸುವುದು.
ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು,
ತುರ್ತು ಸೇವೆಗೆ ಟೋಲ್ ಫ್ರೀ ನಂ. – 1077 / 0824-2442590
Leave a Comment