ಪುತ್ತೂರು : ಮುಸ್ಲಿಂ ವಿದ್ಯಾರ್ಥಿನಿ ಮೇಲೆ ಹಿಂದೂ ವಿದ್ಯಾರ್ಥಿ ಬ್ಲೇಡ್ ದಾಳಿ ಪ್ರಕರಣ – ದ.ಕ. ಜಿಲ್ಲಾ ಎಸ್ಪಿ ಯತೀಶ್ ಎನ್. ಮಾಧ್ಯಮದ ಮುಂದೆ ಹೇಳಿದ್ದೇನು?
ನ್ಯೂಸ್ ಆ್ಯರೋ : ಪುತ್ತೂರಿನ ಕೊಂಬೆಟ್ಟು ಕಾಲೇಜಿನ ಪ್ರಥಮ ಪಿಯುಸಿಯ ಹಿಂದೂ ವಿದ್ಯಾರ್ಥಿ ತನಗೆ ಇರಿದಿದ್ದಾನೆ ಎಂದು ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಆರೋಪಿಸಿ ಆಸ್ಪತ್ರೆಗೆ ದಾಖಲಾದ ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ.
ಸಂತ್ರಸ್ತ ವಿದ್ಯಾರ್ಥಿನಿಯ ದೂರಿನ ಆಧಾರದಲ್ಲಿ ಆರೋಪಿತ ವಿದ್ಯಾರ್ಥಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಈಗಾಗಲೇ ತನಿಖೆ ನಡೆಸಲಾಗುತ್ತಿದೆ.
ತನಿಖೆಯ ಬಳಿಕ ಪ್ರಕರಣದ ಸತ್ಯಾಸತ್ಯತೆ ಹೊರಗೆ ಬರಲಿದೆ. ತನಿಖೆಯಲ್ಲಿ ಸಂಗ್ರಹಿಸಲಾಗುವ ಸಮರ್ಪಕ ದಾಖಲೆಗಳನ್ನು ಕೋರ್ಟ್ ಗೆ ಹಾಜರಿಪಡಿಸಲಿದ್ದೇವೆ. ಹಾಗೆಯೇ ತನಿಖೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ.
ನಾವು ವೈಜ್ಞಾನಿಕವಾಗಿ ಮತ್ತು ಕಾನೂನಿನ ಪ್ರಕಾರ ಹೇಗೆ ತನಿಖೆ ಮಾಡಬೇಕೋ ಹಾಗೆ ಮಾಡುತ್ತೇವೆ. ತನಿಖೆ ಮುಗಿದ ಬಳಿಕ ಮಾಧ್ಯಮಗಳಿಗೆ ಹೆಚ್ಚಿನ ಮಾಹಿತಿ ನೀಡುವುದಾಗಿ ಎಸ್ಪಿ ಯತೀಶ್ ಎನ್. ಹೇಳಿಕೆ ನೀಡಿದ್ದಾರೆ.
Leave a Comment