ಪರಪ್ಪನ ಅಗ್ರಹಾರದ ದೌಲತ್ತಿಗೆ ಬ್ರೇಕ್, ದರ್ಶನ್ ಬಳ್ಳಾರಿಯತ್ತ.. – “ಡಿ ಬಾಸ್” ಇನ್ನು ಕೇರ್ ಆಫ್ ಬಳ್ಳಾರಿ ಜೈಲ್

20240829 073010
Spread the love

ನ್ಯೂಸ್ ಆ್ಯರೋ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್, ಜೈಲಿನಲ್ಲಿ ರಾಜಾತಿಥ್ಯ ಪಡೆದ ಬೆನ್ನಲ್ಲೇ ಕಮಾನ್ ಎತ್ತುವ ಕಾರ್ಯಕ್ಕೆ ಚಾಲನೆ ಸಿಕ್ಕಿತ್ತು. ಇಂದು ನಸುಕಿನ ಜಾವ ಪೋಲಿಸರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ನಟ ದರ್ಶನ್ ಹಾಗೂ ಇತರ ಆರೋಪಿಗಳನ್ನು ಬಳ್ಳಾರಿ ಜೈಲಿಗೆ ಕರೆದುಕೊಂಡು ಹೊರಟಿದ್ದಾರೆ.

ಟಿಟಿಯ ನೋಂದಣಿ ಸಂಖ್ಯೆ KA.41.G.0050ಯಲ್ಲಿ ಪ್ರಕರಣದ ಎ2 ಆರೋಪಿ ದರ್ಶನ್ ನನ್ನು ಕರೆದೊಯ್ಯಲಾಗುತ್ತಿದ್ದು, ಈ ವಾಹನಕ್ಕೆ ಎಸಿಪಿ ರಂಗಪ್ಪ ನೇತೃತ್ವದಲ್ಲಿ ಎಸ್ಕಾರ್ಟ್ ನೀಡಲಾಗಿದೆ.

ನಟ ದರ್ಶನ್ ಗ್ಯಾಂಗ್ ಅನ್ನು ಬೇರೆ ಜೈಲುಗಳಿಗೆ ಸ್ಥಳಾಂತರಿಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶವನ್ನು ಅಧಿಕೃತವಾಗಿ ಬುಧವಾರ ಬೆಳಗ್ಗೆ ಸ್ವೀಕರಿಸಲಾಯಿತು. ಅಲ್ಲದೆ ವಿಶೇಷ ಸೌಲಭ್ಯ ಪಡೆದ ಪ್ರಕರಣದ ಕುರಿತು ಪರಪ್ಪನ ಅಗ್ರಹಾರ ಪೊಲೀಸರ ಮಹಜರ್ ಹಾಗೂ ವಿಚಾರಣೆ ಬಾಕಿ ಇತ್ತು. ಹೀಗಾಗಿ ಆರೋಪಿಗಳನ್ನು ಬೇರೆ ಜೈಲಿಗೆ ಸ್ಥಳಾಂತರಿಸಲು ತಡವಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈಗಾಗಲೇ ದರ್ಶನ್ ಗ್ಯಾಂಗ್ ಸ್ಥಳಾಂತರ ಬಗ್ಗೆ ಶಿವಮೊಗ್ಗ, ಬಳ್ಳಾರಿ, ಬೆಳಗಾವಿ, ಕಲುಬರಗಿ, ಧಾರವಾಡ, ವಿಜಯಪುರ ಹಾಗೂ ಮೈಸೂರು ಸೆಂಟ್ರಲ್ ಜೈಲುಗಳ ಮುಖ್ಯ ಅಧೀಕ್ಷಕರಿಗೆ ಮಾಹಿತಿ ನೀಡಲಾಗಿದೆ. ಆರೋಪಿಗಳಿಗೆ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಆಯಾ ಜೈಲಿನ ಅಧಿಕಾರಿಗಳು ನೀಡಲಿದ್ದಾರೆ. ಜೈಲಿಗೆ ಕರೆದೊಯ್ಯುವಾಗ ಸೂಕ್ತ ಭದ್ರತೆ ಕಲ್ಪಿಸುವಂತೆ ಸಹ ಬೆಂಗಳೂರು ನಗರ ಪೊಲೀಸರಿಗೆ ಮನವಿ ಮಾಡಲಾಗಿದೆ.

Leave a Comment

Leave a Reply

Your email address will not be published. Required fields are marked *