ದೆಹಲಿ ವಿಧಾನಸಭಾ ಚುನಾವಣೆಗೆ ಇಂದು ಮತದಾನ; 70 ಕ್ಷೇತ್ರಗಳಿಗೆ ತ್ರಿಕೋನ ಸ್ಪರ್ಧೆ

delhi-election-2025
Spread the love

ನ್ಯೂಸ್ ಆ್ಯರೋ: ದೆಹಲಿ ವಿಧಾನಸಭಾ ಚುನಾವಣೆಗೆ ಇಂದು ಮತದಾನ ಶುರುವಾಗಿದೆ. ಚಳಿಯ ನಡುವೆಯೇ ಜನರು ಮತಗಟ್ಟೆಗೆ ಹಕ್ಕು ಚಲಾಯಿಸಲು ಆಗಮಿಸುತ್ತಿದ್ದಾರೆ. ದೆಹಲಿಯ ಎಲ್ಲಾ 70 ಸ್ಥಾನಗಳಿಗೂ ಮತದಾನ ನಡೆಯುತ್ತಿದ್ದು, ಸುಮಾರು ಒಂದೂವರೆ ಕೋಟಿ ಮತದಾರರು ಮತ ಚಲಾಯಿಸಲು ಮುಂದಾಗಿದ್ದಾರೆ. ಫೆಬ್ರವರಿ 8ಕ್ಕೆ ಫಲಿತಾಂಶ ಹೊರಬರಲಿದೆ.

ಹಿಂದೆಂದೂ ಕಾಣದ ಜಿದ್ದಾ ಜಿದ್ದಿನ ಕುರುಕ್ಷೇತ್ರವಾಗಿರುವ ರಾಷ್ಟ್ರ ರಾಜಧಾನಿ ನವದೆಹಲಿಯ ವಿಧಾನಸಭೆಗೆ ಇವತ್ತು ಮತದಾನ ನಡೆಯುತ್ತಿದೆ. ಎಎಪಿ, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಭಾರೀ ಪೈಪೋಟಿ ಇದ್ದು ಗೆಲುವು ತಮ್ಮದೇ ಅಂತ ರಣಕಲಿಗಳು ಅಖಾಡಕ್ಕಿಳಿದಿದ್ದಾರೆ. ಇವರೆಲ್ಲರ ರಾಜಕೀಯ ಭವಿಷ್ಯವನ್ನು ಇಂದು ಮತದಾರ ಬರೆಯಲಿದ್ದಾನೆ.

ದೆಹಲಿ ಗದ್ದುಗೆಗಾಗಿ ಮತ್ತೊಮ್ಮೆ ಮಹಾಯುದ್ಧ ನಡೆಯುತ್ತಿದೆ. ಅಧಿಕಾರ ಉಳಿಸಿಕೊಂಡು ಇತಿಹಾಸ ಸೃಷ್ಟಿಸಲು ಆಪ್​ ರಣತಂತ್ರ ಹೆಣೆದಿದ್ರೆ 10 ವರ್ಷಗಳ ಬಳಿಕ ಮತ್ತೆ ಸಿಎಂ ಗಾದಿಗೇರಲು ಕೈ ಪಡೆ ಹವಣಿಸ್ತಿದೆ. ಇತ್ತ 30 ವರ್ಷಗಳ ಬಳಿಕ ದೆಹಲಿ ಚುಕ್ಕಾಣಿ ಹಿಡಿಯಲು ಕೇಸರಿ ಪಾಳಯ ಕಸರತ್ತು ನಡೆಸ್ತಿದೆ.

ದೆಹಲಿ ವಿಧಾನಸಭಾ ಚುನಾವಣೆಗೆ ಮತದಾನ ಶುರುವಾಗಿದೆ. ರಾಷ್ಟ್ರರಾಜಧಾನಿಯ ಮತದಾನ ಪ್ರಭುಗಳು ಬೆಳಗ್ಗೆ 6 ಗಂಟೆಯಿಂದಲೇ ಮತಗಟ್ಟೆಗಳತ್ತ ಮತ ಚಲಾಯಿಸೋದಕ್ಕೆ ಮುಖ ಮಾಡ್ತಿದ್ದಾರೆ. ದೆಹಲಿಯ ಎಲ್ಲಾ 70 ಸ್ಥಾನಗಳಿಗೂ ಬೆಳಿಗ್ಗೆ 7 ಗಂಟೆಯಿಂದ ಮತದಾನ ಶುರುವಾಗಿದೆ. ದೆಹಲಿಯ 1 ಕೋಟಿ 55 ಲಕ್ಷ ಮತದಾರರು ಕಣದಲ್ಲಿರುವ 699 ಅಭ್ಯರ್ಥಿಗಳ ಹಣೆಬರಹ ಬರೆಯುತ್ತಿದ್ದಾರೆ.

ದೆಹಲಿಯಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 36. ಚುನಾವಣೆಯನ್ನ ನ್ಯಾಯಸಮ್ಮತವಾಗಿ ನಡೆಸಲು ಚುನಾವಣಾ ಆಯೋಗ ಸಕಲ ರೀತಿಯಲ್ಲಿ ತಯಾರಿ ನಡೆಸಿದೆ. 13,766 ಮತಗಟ್ಟೆಗಳಲ್ಲಿ 83.76 ಲಕ್ಷ ಪುರುಷರು, 72.36 ಲಕ್ಷ ಮಹಿಳೆಯರು ಮತ್ತು 1,267 ತೃತೀಯ ಲಿಂಗ ಮತದಾರರು ಮತ ಚಲಾಯಿಸಲಿದ್ದಾರೆ. ಭದ್ರತೆಗೆ ಹೆಚ್ಚಿನ ಗಮನ ನೀಡಲಾಗಿದ್ದು 150 ಪ್ಯಾರಾ ಮಿಲಿಟರಿ ಪಡೆ ಸೇರಿದಂತೆ, ದೆಹಲಿಯ ತುಂಬಾ 30 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

Leave a Comment

Leave a Reply

Your email address will not be published. Required fields are marked *