ಮಂಗಳೂರು ನಗರ ಸಿಸಿಬಿ ಪೋಲಿಸರ ಭರ್ಜರಿ ಬೇಟೆ – ಭೂಗತ ಪಾತಕಿ ಕಲಿ ಯೋಗೀಶನ ಸಹಚರರಿಬ್ಬರ ಸೆರೆ : ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗಳು, ಮಾದಕ ವಸ್ತುಗಳು ವಶಕ್ಕೆ..!!

20240730 194236
Spread the love

ನ್ಯೂಸ್ ಆ್ಯರೋ : ಮಂಗಳೂರು ನಗರದಲ್ಲಿ ಅಪರಾಧ ಕೃತ್ಯವನ್ನು ನಡೆಸುವ ಉದ್ದೇಶದಿಂದ ಅಕ್ರಮವಾಗಿ ಶಸ್ತ್ರಾಸ್ತ್ರವಾದ ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗುಂಡುಗಳು, ಮಾದಕ ವಸ್ತುಗಳನ್ನು ಹೊಂದಿಕೊಂಡಿದ್ದ ಕುಖ್ಯಾತ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ‌.

ಕುಖ್ಯಾತ ರೌಡಿಗಳಾದ ಮೊಹಮ್ಮದ್ ಹನೀಫ್ ಅಲಿಯಾಸ್ ಅಲಿ ಮುನ್ನಾ(40), ವಾಸ: ದೇರ ಹೌಸ್, ಕುರುಡಪದವು ಪೋಸ್ಟ್, ಪೈವಳಿಕೆ ಗ್ರಾಮ, ಕಾಸರಗೋಡು ಜಿಲ್ಲೆ, ಕೇರಳ ರಾಜ್ಯ ಮತ್ತು ಮೊಹಮ್ಮದ್ ರಫೀಕ್ ಅಲಿಯಾಸ್ ಮುಡಿಪು ರಫೀಕ್ ಅಲಿಯಾಸ್ ರಫೀಕ್(36), ವಾಸ: ಕುಕ್ಕುದಕಟ್ಟೆ ಹೌಸ್, ಮುಡಿಪು ಚರ್ಚಿನ ಹಿಂದೆ ಮನೆ, ಬಾಳೆಪುಣಿ ಗ್ರಾಮ ಮತ್ತು ಅಂಚೆ, ಮುಡಿಪು, ಬಂಟ್ವಾಳ ತಾಲೂಕು. ಹಾಲಿ ವಾಸ: ಬಾಡಿಗೆ ಮನೆ, 1ನೇ ಕ್ರಾಸ್, 3ನೇ ಮೇನ್ ರೋಡ್, ಮುನೀಶ್ವರ ಟೆಂಪಲ್ ಹತ್ತಿರ, ವಿನಾಯಕ ನಗರ, ಹೊಸಕೋಟೆ ಪೋಸ್ಟ್, ಬೆಂಗಳೂರು ಗ್ರಾಮಾಂತರ ಜಿಲ್ಲೆ ಬಂಧಿತ ಆರೋಪಿಗಳು.

ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ಕಲಿ ಯೋಗೀಶನ ಸಹಚರರಿಬ್ಬರು ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗುಂಡುಗಳು ಹಾಗೂ ಮಾದಕ ವಸ್ತುಗಳಾದ ಎಂಡಿಎಂಎ ಜೊತೆ ಇನ್ನೋವಾ ಕಾರಿನಲ್ಲಿ ಮಂಗಳೂರು ನಗರದಲ್ಲಿ ಅಪರಾಧ ಕೃತ್ಯವನ್ನು ನಡೆಸಲು ಸಂಚು ರೂಪಿಸಿರುವ ಬಗ್ಗೆ ಸಿಸಿಬಿ ಪೋಲಿಸರಿಗೆ ಮಾಹಿತಿ ಲಭ್ಯವಾಗಿತ್ತು.

ಈ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಫಳ್ನೀರ್ ಬಳಿಯಿಂದ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಭೂಗತ ಪಾತಕಿ ಕಲಿ ಯೋಗೀಶನ ಸಹಚರರನ್ನು ಬಂಧಿಸಿದ್ದಾರೆ. ಬಂಧಿತರಿಂದ ಪಿಸ್ತೂಲ್-1, ರಿವಾಲ್ವರ್-1, 12 ಸಜೀವ ಮದ್ದುಗುಂಡುಗಳು, 42 ಗ್ರಾಂ ಮಾದಕ ವಸ್ತುವಾದ ಎಂಡಿಎಂಎ, ಇನ್ನೋವಾ ಕಾರು ಹಾಗೂ 3 ಮೊಬೈಲ್ ಫೋನುಗಳು, ಡಿಜಿಟಲ್ ತೂಕ ಮಾಪಕ ಗಳನ್ನು ವಶಪಡಿಸಿಕೊಂಡಿದ್ದು, ವಶಪಡಿಸಿಕೊಂಡ ಸೊತ್ತಿನ ಆಂದಾಜು ಮೌಲ್ಯ ರೂ. 10 ಲಕ್ಷ ಎಂದು ಅಂದಾಜಿಸಲಾಗಿದೆ.

20240730 1943104307610819285049762
20240730 1943281723158054680280669

ಆರೋಪಿಗಳಿಬ್ಬರು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ಕಲಿ ಯೋಗೀಶನ ಸಹಚರರಾಗಿದ್ದು, ಆರೋಪಿಗಳ ಪೈಕಿ ಮೊಹಮ್ಮದ್ ಹನೀಫ್ ಅಲಿಯಾಸ್ ಅಲಿ ಮುನ್ನಾ ಎಂಬಾತ ಈ ಹಿಂದೆ ಮಂಗಳೂರು ನಗರದ ಸಂಜೀವ ಶೆಟ್ಟಿ ಬಟ್ಟೆ ಅಂಗಡಿಯಲ್ಲಿ ಶೂಟೌಟ್ ನಡೆಸಿದ ಪ್ರಕರಣ, ಪುತ್ತೂರು ರಾಜಧಾನಿ ಜ್ಯುವೆಲ್ಲರಿ ಶೂಟೌಟ್ ಪ್ರಕರಣ, ಕೇರಳದ ಕಾಸರಗೋಡು ಜಿಲ್ಲೆಯ ಬೇವಿಂಜೆಯ ಪಿಡಬ್ಲೂಡಿ ಕಂಟ್ರಾಕ್ಟರ್ ಮನೆಗೆ ಶೂಟೌಟ್ ನಡೆಸಿದ ಪ್ರಕರಣ ಸಹಿತ ಒಟ್ಟು 14 ಪ್ರಕರಣಗಳ ಆರೋಪಿಯಾಗಿದ್ದಾನೆ. ಈತನ ವಿರುದ್ಧ ಮಂಗಳೂರು ಉತ್ತರ, ಬರ್ಕೆ, ಉಳ್ಳಾಲ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ವಾರಂಟ್ ಜಾರಿಯಲ್ಲಿದೆ.

ಇನ್ನೊಬ್ಬ ಆರೋಪಿ ಮೊಹಮ್ಮದ್ ರಫೀಕ್ ಅಲಿಯಾಸ್ ಮುಡಿಪು ರಫೀಕ್ ಎಂಬಾತನ ವಿರುದ್ಧ ಮಂಗಳೂರು ನಗರದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ, ಬರ್ಕೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ, ಮಂಗಳೂರು ಪೂರ್ವ ಠಾಣೆಯಲ್ಲಿ ದರೋಡೆಗೆ ಸಂಚು ರೂಪಿಸಿದ ಪ್ರಕರಣ, ಕೊಣಾಜೆ ಠಾಣೆಯಲ್ಲಿ ಅಪಹರಣ ಪ್ರಕರಣ, ದೇವಸ್ಥಾನ ಕಳವು ಪ್ರಕರಣ ಹಾಗೂ ಹಲ್ಲೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ಹಾಗೂ ಕೇರಳದ ಮಂಜೇಶ್ವರ, ಕಣ್ಣೂರು ನಗರ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣ ಹೀಗೆ ಒಟ್ಟು 9 ಪ್ರಕರಣಗಳು ದಾಖಲಾಗಿವೆ.

ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಡಿ ಕುಲಕರ್ಣಿ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಸಿಸಿಬಿ ಪಿಎಸ್ಐ ಯವರಾದ ನರೇಂದ್ರ, ಶರಣಪ್ಪ ಭಂಡಾರಿ, ಹರೀಶ್ ಪದವಿನಂಗಡಿ, ಎಎಸ್ಐ ಮೋಹನ್ ಕೆ ವಿ, ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಘಟಕದ ಸಿಬ್ಬಂದಿಯವರು ಭಾಗವಹಿಸಿದ್ದಾರೆ.

Leave a Comment

Leave a Reply

Your email address will not be published. Required fields are marked *

error: Content is protected !!